ವಿಜಯಪುರ: ಕೆಲವು ಅಧಿಕಾರಿಗಳು ಬಿಜೆಪಿ ಸರ್ಕಾರವಿದ್ದಾಗ ರಾಜೀನಾಮೆ ನೀಡಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರವಿದ್ದಾಗ ದಕ್ಷ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಇಂದು ನಗರದಲ್ಲಿ ಮಾತನಾಡಿದ ಅವರು, ನಮ್ಮ ಬಿಜೆಪಿ ಸರ್ಕಾರದಲ್ಲಿ ಕೇವಲ ಒಬ್ಬರು ಅಧಿಕಾರಿ ರಾಜೀನಾಮೆ ನೀಡಿದ್ದಾರೆ ಅಷ್ಟೇ. ಆದರೆ ಹಿಂದಿನ ಸಿದ್ದರಾಮಯ್ಯ ಸರ್ಕಾರವಿದ್ದಾಗ ಡಿವೈಎಸ್ಪಿಯಿಂದ ಎಸ್ಪಿವರೆಗೆ ರಾಜೀನಾಮೆ ನೀಡಿದ್ದರು. ಸಸಿಕಾಂತ್ ಅವರ ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.
Advertisement
Advertisement
ಅಧಿಕಾರಿಗಳ ರಾಜೀನಾಮೆಗೂ ಸರ್ಕಾರಕ್ಕೂ ಸಂಬಂಧವಿಲ್ಲ. ಅವರಿಗೆ ತೀರ್ಮಾನ ತೆಗೆದುಕೊಳ್ಳುವ ಹಕ್ಕು ಇದೆ ಎಂದರು. ಇನ್ನು ಯತ್ನಾಳ ನನಗೆ ಮಾರ್ಗದರ್ಶನ ನೀಡಿದ್ದಾರೆ. ನನಗೆ ಹಿಂದೆ ರಾಜ್ಯಾಧ್ಯಕ್ಷ ಅವಕಾಶ ಕೊಟ್ಟಿರಲಿಲ್ಲ. ಯತ್ನಾಳ ಉತ್ತರ ಕರ್ನಾಟಕ ಪ್ರವಾಸ ಮಾಡಿ ಎಂದಿದ್ದರು ಯತ್ನಾಳ ಹೇಳಿದಂತೆ ಉತ್ತರ ಕರ್ನಾಟಕ ಪ್ರವಾಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.
Advertisement
Advertisement
ಸಿಎಂ ಬಿಎಸ್‍ವೈ ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ನನ್ನ ಮಧ್ಯೆ ಯಾವುದೇ ಭಿನ್ನಮತ ವ್ಯಕ್ತವಾಗಿಲ್ಲ. ಯಡಿಯೂರಪ್ಪ ನನಗೆ ಮಾರ್ಗದರ್ಶಕರು. ಪಕ್ಷ ಸಂಘಟಿಸುವ ಕುರಿತು ಉತ್ತಮ ಚರ್ಚೆಯಾಗಿದೆ. ನಮ್ಮ ಕಡೆ ಕಾಫಿ ಪ್ಲ್ಯಾಂಟರ್ ಥರ ನ್ಯೂಸ್ ಪ್ಲ್ಯಾಂಟರ್ ಈ ಸುದ್ದಿಯನ್ನು ಸೃಷ್ಠಿಸಿದ್ದಾರೆ ಎಂದು ಮಾಧ್ಯಮಗಳ ಮೇಲೆ ಕೋಪಗೊಂಡರು.