ವಿಜಯಪುರ: ಸಿದ್ದರಾಮಯ್ಯ (Siddaramaiah) ವಿರುದ್ಧ ಪೋಸ್ಟ್ ಮಾಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು ಮಾಡಲಾಗಿದೆ. ವಿಜಯಪುರ (Vijayapura) ಗ್ರಾಮಾಂತರ ಠಾಣೆ ಕಾನ್ಸ್‌ಟೇಬಲ್ ರಾಜಶೇಖರ ಖಾನಾಪುರ ಅಮಾನತು ಆದ ಕಾನ್ಸ್‌ಟೇಬಲ್.
ಅಮಾನತು ಮಾಡಿ ವಿಜಯಪುರ ಎಸ್‌ಪಿ ಎಚ್.ಡಿ.ಆನಂದಕುಮಾರ್ ಆದೇಶ ಹೊರಡಿಸಿದ್ದಾರೆ. ʻಪೊಲೀಸರನ್ನು ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗುʼ ಎಂದು ಪೇದೆ ರಾಜಶೇಖರ ಪೋಸ್ಟ್ ಮಾಡಿದ್ದ. ಇದನ್ನೂ ಓದಿ: BJP ಹಿಂದೂ-ಮುಸ್ಲಿಂ, ದಲಿತ-ಬ್ರಾಹ್ಮಣರ ನಡುವೆ ಜಗಳ ತಂದಿಡುತ್ತಿದೆ: ಸುರ್ಜೇವಾಲಾ ಕಿಡಿ
ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಭಾರಿ ವೈರಲ್ ಆಗಿತ್ತು. ಪೇದೆಯ ಪೋಸ್ಟ್ ವಿರುದ್ಧ ಕುರುಬ ಸಮುದಾಯ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು.
ಪೇದೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದರು. ಪರಿಣಾಮವಾಗಿ ಪೇದೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಕುಂಭ ಕಳಶ ಹೊತ್ತು ಮಹಿಳೆಯರೊಂದಿಗೆ ಹೆಜ್ಜೆ ಹಾಕಿದ ಶಶಿಕಲಾ ಜೊಲ್ಲೆ