ವಿಜಯಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿಯಿಂದ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯ ಶಿವಯೋಗಿ ನೇದಲಗಿ ಅಧ್ಯಕ್ಷ ಸ್ಥಾನ ಪಡೆದಿದ್ದಾರೆ. ಇತ್ತ ಸಂಖ್ಯಾಬಲವಿದ್ದರು ಬಿಜೆಪಿ ಪಕ್ಷಕ್ಕೆ ಸ್ಥಾನ ಕೈ ತಪ್ಪಿದೆ.
ಈ ಹಿಂದೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಕಾಂಗ್ರೆಸ್ ಪಕ್ಷದ ಸದಸ್ಯೆ ನಿಲ್ಲಮ್ಮ ಮೇಟಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಐದು ವರ್ಷಗಳ ಅವಧಿಯ ಆಡಳಿತದಲ್ಲಿ ಈ ಮೊದಲು ಮೂವತ್ತು, ಮೂವತ್ತು ತಿಂಗಳಂತೆ ಅಧಿಕಾರ ಒಬ್ಬರಿಗೆ ಕಾಂಗ್ರೆಸ್ ಪಕ್ಷದ ಅಂದಿನ ಸಚಿವರು, ಶಾಸಕರು ಒಪ್ಪಂದ ಮಾಡಿದ್ದರು. ಒಪ್ಪದಂತೆ ಮೂವತ್ತು ತಿಂಗಳ ಆದ ಬಳಿಕ ಹಾಲಿ ಅಧ್ಯಕ್ಷೆ ನಿಲ್ಲಮ್ಮ ಮೇಟಿ ರಾಜೀನಾಮೆ ನೀಡಿದ್ದರು. ಇನ್ನೂ 2ನೇ ಅವಧಿಗೆ ಇಂಡಿ ತಾಲೂಕಿನ ಸಾಲೋಟಗಿ ಮತಕ್ಷೇತ್ರದ ಸದಸ್ಯ ಶಿವಯೋಗಪ್ಪ ನೆದಲಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದರು.
Advertisement
Advertisement
ಯಾವುದೇ ಪಕ್ಷಕ್ಕೆ ಬಹುಮತ ಇಲ್ಲದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿತ್ತು. ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 42 ಸ್ಥಾನಗಳಿದ್ದು, ಬಿಜೆಪಿ 20, ಕಾಂಗ್ರೆಸ್ 18, ಜೆಡಿಎಸ್ 3, ಪಕ್ಷೇತರ 1 ಸ್ಥಾನಗಳನ್ನು ಹೊಂದಿದೆ. ಅಧಿಕ ಸ್ಥಾನಗಳನ್ನು ಹೊಂದಿರುವ ಬಿಜೆಪಿ ಚುನಾವಣೆಯಲ್ಲಿ 17 ಮತಗಳನ್ನು ಪಡೆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ 21 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಮತ್ತೆ ಮುಖಭಂಗ ಅನುಭವಿಸಿದೆ. ಚುನಾವಣೆಗೆ ಬಿಜೆಪಿಯ 4 ಸದಸ್ಯರು ಗೈರಾಗುವ ಮೂಲಕ ಸ್ವ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷ ಭಿನ್ನಮತ ಹೊರ ಬಿದ್ದಿದೆ.
Advertisement
ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಸದಸ್ಯರ ಗೈರು ಹಾಜರಿ ಹಾಗೂ ರಾಜ್ಯ ಮಟ್ಟಲ್ಲಿ ದೋಸ್ತಿ ಪಕ್ಷದೊಂದಿಗೆ ಕೈ ಜೋಡಿಸಿ ರಣತಂತ್ರ ರೂಪಿಸಿದ್ದ ಕಾಂಗ್ರೆಸ್ ಮುಖಂಡರು ಮತ್ತೆ ಅಧ್ಯಕ್ಷ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಗೃಹ ಸಚಿವ ಎಂ.ಬಿ ಪಾಟೀಲ್, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ಜೆಡಿಎಸ್ ಪಕ್ಷದ ಎಂ.ಸಿ ಮನಗೂಳಿ ಜಿಲ್ಲೆಯವರಾಗಿದ್ದು. ಮತ್ತೆ ಕಾಂಗ್ರೆಸ್‍ದ ಪಕ್ಷಯನ್ನು ಅಭ್ಯರ್ಥಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv