ಚಿತ್ರದುರ್ಗ: ಬಿಜೆಪಿ (BJP) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ (BY Vijayendra) ‘ಹೊಸ ಬಾಟಲಿಯಲ್ಲಿ ಹಳೆ ವೈನ್’ ಹಾಕಿದಂತೆ. ಹೀಗಾಗಿ ಆ ವಿಚಾರಕ್ಕೆ ನೋ ರಿಯಾಕ್ಷನ್ ಎಂದು ಸಚಿವ ಡಿ.ಸುಧಾಕರ್ (D Sudhakar) ಹೇಳಿದರು.
ಚಿತ್ರದುರ್ಗದಲ್ಲಿ (Chitradurga) ನಡೆದ ಒನಕೆ ಓಬವ್ವ ಜಯಂತಿಯ ಮೆರವಣಿಗೆ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕವಾಗಿರುವುದಕ್ಕೆ ಕೆಲ ಹಿರಿಯ ಬಿಜೆಪಿ ನಾಯಕರು ಅಸಮಾಧಾನಗೊಂಡಿದ್ದಾರೆ. ಅವರ ಪಕ್ಷದಲ್ಲಿನ ಅಸಮಾಧಾನ ಅವರ ಆಂತರಿಕ ವಿಚಾರವಾಗಿದೆ. ಹೀಗಾಗಿ ನಾವು ಆ ವಿಚಾರಕ್ಕೆ ಮೂಗು ತೂರಿಸಲ್ಲ ಎಂದರು. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಮುಂದಾದ ಸಚಿವರನ್ನು ಗರ್ಭಗುಡಿ ಬಾಗಿಲಲ್ಲೇ ತಡೆದ ಮಹಿಳಾ ಕಾನ್ಸ್‌ಟೇಬಲ್
Advertisement
Advertisement
ನಮ್ಮ ಸಿದ್ಧಾಂತವೇ ಬೇರೆ, ಬಿಜೆಪಿಯವರ ಸಿದ್ಧಾಂತವೇ ಬೇರೆಯಾಗಿದ್ದು, ಅವರು ಸಮಾಜ ಒಡೆಯುವ ನೀತಿ ಹೊಂದಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಅವರ ನೇತೃತ್ವದ ಬಿಜೆಪಿ ಅಧಿಕಾರ ಪಡೆಯಲ್ಲ ಎಂದು ಭವಿಷ್ಯ ನುಡಿದರು. ಹಾಗೆಯೇ ಬಿಜೆಪಿಗೆ ಈವರೆಗೆ ರಾಜ್ಯಾಧ್ಯಕ್ಷರಿಲ್ಲ ಎಂದು ಹೇಳುತ್ತಿದ್ದರು. ಈಗ ನೇಮಕವಾಗಿದೆ. ನಾವು ಎಲ್ಲೂ ಬಿಜೆಪಿಗೆ ಗೇಲಿಮಾಡಿಲ್ಲ. ಆದರೆ ಇಲ್ಲಿಯವರೆಗೂ ವಿರೋಧ ಪಕ್ಷದ ನಾಯಕರೇ ಬಿಜೆಪಿಗೆ ಇಲ್ವಲ್ಲಾ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ವಿಜಯೇಂದ್ರ ಆಯ್ಕೆಯಿಂದ ಆಕಾಂಕ್ಷಿಗಳಿಗೆ ನಿರಾಸೆ ಸಹಜ: ಶ್ರೀರಾಮುಲು
Advertisement
ಜೊತೆಗೆ ರಾಜ್ಯದ ಪ್ರಬಲ ಸಮುದಾಯವಾದ ಲಿಂಗಾಯತರ ಓಲೈಕೆಗೆ ಬಿಜೆಪಿ ವಿಜಯೇಂದ್ರ ಅವರನ್ನು ಅಸ್ತ್ರವಾಗಿ ಬಳಸಿಕೊಂಡಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಡಿಕೆ ಶಿವಕುಮಾರ್‌ಗೆ ವಿಜಯೇಂದ್ರ ಅವರನ್ನು ಹೋಲಿಸಬೇಡಿ. ಕೆಪಿಸಿಸಿ ಅಧ್ಯಕ್ಷರಾದ ಡಿಕೆಶಿಯವರ ಅನುಭವ, ತಾಳ್ಮೆ ಹಾಗೂ ಪಕ್ಷ ಸಂಘಟನೆ ವಿಚಾರದಲ್ಲಿ ಅವರು ಸಾಟಿಯಲ್ಲ. ಹೀಗಾಗಿ ವಿಜಯೇಂದ್ರಗೆ ಡಿಕೆಶಿ ಹೋಲಿಕೆ ಸರಿಯಲ್ಲ. ರಾಜ್ಯದಲ್ಲಿ ಎಲ್ಲಾ ಜಾತಿಯವರು ನಮ್ಮ ಪಕ್ಷದ ಜೊತೆಗಿದ್ದಾರೆ. ಎಲ್ಲಾ ಸಮಾಜದ ಮತದಾರರು ನಮಗೆ ಮತ ಹಾಕಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ, ಅಮಿತ್ ಶಾರಿಂದ ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ: ಯಡಿಯೂರಪ್ಪ
Advertisement
ಮಾಜಿ ಸಚಿವ ಎಸ್.ಟಿ.ಸೋಮಶೇಖರ್ (ST Somashekar) ಕೂಡ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೋಮಶೇಖರ್ ನನ್ನ ಆಪ್ತ. ಅವರ ಮೈಯಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಅವರು ಹಲವು ಕಾರಣಗಳಿಂದ ಆಪರೇಷನ್ ಕಮಲದಿಂದ ಬಿಜೆಪಿಗೆ ಹೋಗಿದ್ದರು. ಈಗ ವಾಪಸ್ ಬರುತ್ತಾರೆ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ವಿಜಯೇಂದ್ರಗೆ ಪಕ್ಷದ ಸಾರಥ್ಯ – ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ಮೌನ