ಶಿವಮೊಗ್ಗ: ವರುಣಾ ಕ್ಷೇತ್ರದಿಂದ ಪುತ್ರ ವಿಜಯೇಂದ್ರ ಟಿಕೆಟ್ ತಪ್ಪಿಕ್ಕೆ ವಿಶೇಷ ಕಾರಣವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ವಿಜಯೇಂದ್ರ ಕೂಡ ಸಂತೋಷದಿಂದ ಕೆಲಸ ಮಾಡುತ್ತಿದ್ದಾರೆ. ಅಲ್ಲಿ ವಿಶೇಷ ಕಾರಣದಿಂದ ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿದೆ ಅಷ್ಟೇ. ಸದ್ಯಕ್ಕೆ ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಅಭ್ಯರ್ಥಿಗಳ ಜೊತೆ ಮಾತನಾಡುತ್ತಿದ್ದಾರೆ. ಚುನಾವಣೆ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಯುದ್ಧ ಕಾಲದಲ್ಲಿ ಮಾಜಿ ಸಿಎಂ ಸೈಲೆಂಟ್-ಪ್ರಚಾರಕ್ಕೂ ಹೋಗದೇ ಮನೆಯಲ್ಲಿ ಕುಳಿತ ಬಿಎಸ್‍ವೈ
Advertisement
Advertisement
ಈ ವೇಳೆ ಮೋದಿ ಕುರಿತು ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಒಬ್ಬ ತಲೆತಿರುಕ. ಆತನ ಮಾತಿಗೆ ಒತ್ತು ನೀಡುವ ಅಗತ್ಯವಿಲ್ಲ. ರಾಹುಲ್ ಗೆ ಯಾರ ಬಗ್ಗೆ ಏನು ಮಾತನಾಡಬೇಕು ಎಂಬ ಜ್ಞಾನವಿಲ್ಲ. ತನ್ನ ಸುತ್ತಮುತ್ತ ರಾಜ್ಯ ಹಾಳು ಮಾಡಿದವರನ್ನು ಇಟ್ಟುಕೊಂಡು ಓಡಾಡುತ್ತಿದ್ದಾರೆ. ತಾನು ಏನು ಎಂದು ತಿಳಿಯದೆ ಮಾತನಾಡುವುದು ಸರಿಯಲ್ಲ. ಇನ್ನೊಬ್ಬರ ಬಗ್ಗೆ ಮಾತಾಡುವುದಕ್ಕೆ ಅವರಿಗೆ ನೈತಿಕತೆ ಇಲ್ಲ. ರಾಹುಲ್ ಹಾಗೂ ಸಿದ್ದರಾಮಯ್ಯ ಅವರಿಗೆ ಜನ ಚುನಾವಣೆಯಲ್ಲಿ ಬುದ್ಧಿ ಕಲಿಸಲಿದ್ದಾರೆ. ವರುಣಾದಲ್ಲಿ ನೋಟಾ ಕೈಬಿಟ್ಟು ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕೋರಿದ್ದೇನೆ ಎಂದ್ರು.
Advertisement
ಈಗಾಗಲೇ ಯಡಿಯೂರಪ್ಪ 224 ಕ್ಷೇತ್ರದಲ್ಲಿ ಪರಿವರ್ತನಾ ಯಾತ್ರೆ ಮಾಡಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದು, ಕೇವಲ ಆಪ್ತರ 100 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಪ್ಲಾನ್ ರೂಪಿಸಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.