ರಾಮನಗರ: ಚನ್ನಪಟ್ಟಣ (Channapatna) ಮೈತ್ರಿ ಟಿಕೆಟ್ ಕಗ್ಗಂಟು ಮುಂದುವರಿದಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಪದೇ ಪದೇ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜೊತೆ ಸಿ.ಪಿ.ಯೋಗೇಶ್ವರ್ ಸೋಮವಾರ ದೆಹಲಿಗೆ ತೆರಳಲಿದ್ದಾರೆ.
ಟಿಕೆಟ್ ವಿಚಾರವಾಗಿ ವರಿಷ್ಠರ ಜೊತೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಬಸವರಾಜ್ ಬೊಮ್ಮಾಯಿ, ಡಾ.ಅಶ್ವಥ್ ನಾರಾಯಣ್, ಸಿ.ಟಿ.ರವಿ, ಅರವಿಂದ್ ಬೆಲ್ಲದ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಮಿಶ್ ಶಾ ಹಾಗೂ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಸಭೆ ನಡೆಸಿ ಬಳಿಕ ಕುಮಾರಸ್ವಾಮಿ ಜೊತೆಗೂ ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: Karnataka Rain Alert | ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯ ಮನ್ಸೂಚನೆ
Advertisement
ಇನ್ನೂ ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಬಿಜೆಪಿ (BJP) ನಾಯಕರು ಜವಾಬ್ದಾರಿ ತೆಗೆದುಕೊಂಡು ಈ ಚುನಾವಣೆ ನಡೆಸಬೇಕು. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಹೆಚ್‌ಡಿಕೆ ಹೊಣೆಗಾರಿಕೆ ಇದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು. ಮುಂದಿನ ವಾರ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ. 100ಕ್ಕೆ 100ರಷ್ಟು ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದರು. ಇದನ್ನೂ ಓದಿ: ನೂರು ಜನ ಸಿದ್ದರಾಮಯ್ಯ ಬಂದ್ರೂ ನನ್ನನ್ನ ಬಂಧಿಸಲು ಸಾಧ್ಯವಿಲ್ಲ – ಹೆಚ್‌ಡಿಕೆ ಸವಾಲ್
Advertisement
Advertisement
ಮೊದಲು ಎರಡೂ ಪಕ್ಷದ ನಾಯಕರ ಸಮನ್ವಯ ಸಭೆ ಆಗಬೇಕು. ಈ ಸಂಬಂಧ ಇಂದು ದೆಹಲಿಗೆ ಹೋಗಬೇಕಿತ್ತು. ಆದರೆ ಕೆಲಸ ರಾಜಕೀಯ ವಿದ್ಯಮಾನಗಳಿಂದ ಪ್ರವಾಸ ಮುಂದೂಡಿದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ನನಗೆ ಟಿಕೆಟ್ ಕೊಡುವ ಮಾತು ಕೊಟ್ಟಿದ್ದಾರೆ. ಆದರೆ ಇದು ಕುಮಾರಸ್ವಾಮಿ ಅವರ ಕ್ಷೇತ್ರ. ಹಾಗಾಗಿ ವರಿಷ್ಠರ ಜೊತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು ನನ್ನ ಜೊತೆ ಇದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲ್ಲುವ ಏಕೈಕ ಕ್ಷೇತ್ರ ಇದು. ಹಾಗಾಗಿ ಎರಡು ಪಕ್ಷದ ನಾಯಕರಿಗೆ ಟಿಕೆಟ್ ಕೊಡಿ ಅಂತ ಕೇಳಿದ್ದೇನೆ. ಹೆಚ್‌ಡಿಕೆಯನ್ನು ಎರಡು ಬಾರಿ ಭೇಟಿ ಮಾಡಿದ್ದೇನೆ. ಅವರು ಕೂಡ ಟಿಕೆಟ್ ಕೊಡಲು ಒಪ್ಪಿದ್ದಾರೆ. ನಾನು ಚುನಾವಣೆ ಸ್ಪರ್ಧೆ ಮಾಡೇ ಮಾಡುತ್ತೇನೆ. ನನ್ನ ಮೊದಲ ಆಧ್ಯತೆ ಮಾತೃಪಕ್ಷ ಬಿಜೆಪಿಗೆ. ಇಲ್ಲವಾದರೇ ಮುಂದಿನ ಯೋಚನೆ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿ
Advertisement