ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ನಡ್ಡಾರವರು ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ ತೆಗೆದುಕೊಂಡು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ (B.Y Vijayendra) ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಳ್ಳುವುದನ್ನು ನಾವ್ಯಾರು ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಕೂತು ಅಧ್ಯಕ್ಷರನ್ನಾಗಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಈ ಬಗ್ಗೆ ಬೇಕಾದರೆ ರಾಷ್ಟ್ರ ನಾಯಕರನ್ನು ವಿಚಾರಿಸಿಕೊಳ್ಳಬಹುದು ಎಂದಿದ್ದಾರೆ. ಇದನ್ನೂ ಓದಿ: ಬೂತ್ ಗೆದ್ದರೆ, ದೇಶ ಗೆಲ್ತೇವೆ: ಬಿವೈ ವಿಜಯೇಂದ್ರ
Advertisement
Advertisement
ರಾಜ್ಯಾದ್ಯಂತ ಪ್ರವಾಸ ಮಾಡಿ ಲೋಕಸಭೆ ಗೆಲ್ಲುವುದು ನಮ್ಮ ಗುರಿಯಾಗಿದೆ. 25 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಲೋಕಸಭಾ ಚುನಾವಣೆ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ನಾವು ಪ್ರವಾಸ ಮಾಡಿದ ಮೇಲೆ ಜನರ ಪ್ರತಿಕ್ರಿಯೆ ನೋಡಿದ ಮೇಲೆ ಕಾಂಗ್ರೆಸ್‍ನವರಿಗೆ ತಿಳಿಯಲಿದೆ. ನಮಗೆಲ್ಲ ಮೋದಿಯಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿದ್ದಾರೆ ಎಂದಿದ್ದಾರೆ.
Advertisement
Advertisement
ಈ ವೇಳೆ ಯತ್ನಾಳ್ ಹಾಗೂ ಸೋಮಣ್ಣರಿಗೆ ಕರೆ ಮಾಡಿ ಯಡಿಯೂರಪ್ಪ ಅವರು ಮಾತಾಡಿದ್ದಾರೆ. ಪಕ್ಷ ಸಂಘಟನೆ ಮುಖ್ಯ ಎಲ್ಲರೂ ಒಟ್ಟಾಗಿರೋಣ ಎಂದು ಈ ವೇಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿಜಯೇಂದ್ರಗೆ ಪಕ್ಷದ ಸಾರಥ್ಯ – ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ಮೌನ