– ಸೋಮವಾರ ಹೈಕಮಾಂಡ್‌ಗೆ ಗ್ರೌಂಡ್ ರಿಪೋರ್ಟ್ ಸಲ್ಲಿಕೆ
ಬೆಂಗಳೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ಪಾಲಿಟಿಕ್ಸ್ ಜೋರಾಗಿದೆ. ಅದ್ರಲ್ಲೂ ಚನ್ನಪಟ್ಟಣ ವಿಚಾರವೇ ಹೆಚ್ಚು ಸದ್ದು ಮಾಡ್ತಿದೆ. ಮೈತ್ರಿ ಟಿಕೆಟ್ ವಿಚಾರವಾಗಿ ಬಿಜೆಪಿ-ಜೆಡಿಎಸ್ (BJP JDS Alliance) ನಡುವೆ ಇನ್ನೂ ಒಮ್ಮತ ಮೂಡಿಲ್ಲ. ಇತ್ತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಯಾಗಿರುವ ಸಿ.ಪಿ ಯೋಗೇಶ್ವರ್ (CP Yogeshwara) ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
Advertisement
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಭಾನುವಾರ ಸಂಜೆ 5:30ರ ವಿಮಾನದಲ್ಲಿ ದೆಹಲಿಗೆ ಹೊರಟಿದ್ದು, ಸೋಮವಾರ (ಅ.21) ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದನ್ನೂ ಓದಿ: ಮೀಸಲು ಅರಣ್ಯ ಪ್ರದೇಶದಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ತಡೆ – ಅರಸೀಕೆರೆ ಕೆರೆಗಳಿಗೆ ಹರಿಯದ ನೀರು
Advertisement
ಹೈಕಮಾಂಡ್‌ಗೆ ಉಪಚುನಾವಣೆ (By Election) ಗ್ರೌಂಡ್ ರಿಪೋರ್ಟ್ ನೀಡಿದ ಬಳಿಕ ಚುನಾವಣಾ ತಯಾರಿ, ಕ್ಷೇತ್ರದ ಚಿತ್ರಣ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಚನ್ನಪಟ್ಟಣ ಟಿಕೆಟ್ ಜಟಾಪಟಿ, ಸಿಪಿವೈ ಹಠದ ಬಗ್ಗೆಯೂ ಮಾಹಿತಿ ಕೊಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: 6 ಇಂಡಿಗೋ ವಿಮಾನಗಳಲ್ಲಿ 12 ಬಾಂಬ್ – ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಬೆದರಿಕೆ
Advertisement
Advertisement
ಕಾಂಗ್ರೆಸ್‌ನಲ್ಲೂ ಟಿಕೆಟ್ ಕಗ್ಗಂಟು:
ಇನ್ನೂ ಮತ್ತೊಂದೆಡೆ ಚನ್ನಪಟ್ಟಣದಿಂದ ಅಭ್ಯರ್ಥಿಯಾಗಿ ಯಾರನ್ನ ಕಣಕ್ಕಿಳಿಸಬೇಕು ಅನ್ನೋ ಬಗ್ಗೆ ಕಾಂಗ್ರೆಸ್ ಕೂಡ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದೆ. ಈ ಕ್ಷೇತ್ರದ ವಿಚಾರದಲ್ಲಿ ಸ್ಪೆಷಲ್ ಇಂಟ್ರೆಸ್ಟ್ ತೋರಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಮೇಲಿಂದ ಮೇಲೆ ಸಭೆ ಮಾಡ್ತಿದ್ದು, ಅಭಿಪ್ರಾಯ ಸಂಗ್ರಹ ಮಾಡ್ತಿದ್ದಾರೆ. ಈ ಹೊತ್ತಲ್ಲೇ ಇಂಟ್ರೆಸ್ಟಿಂಗ್ ಬೆಳವಣಿಗೆ ನಡೆದಿದೆ. ನಿನ್ನೆಯವರೆಗೂ ನಾನು ಸ್ಪರ್ಧೆ ಮಾಡಲ್ಲ ಅಂತಿದ್ದ ಡಿಕೆ ಸುರೇಶ್ ಇದೀಗ ರಾಗ ಬದಲಿಸಿದ್ದಾರೆ. ಪಕ್ಷ ತೀರ್ಮಾನ ಮಾಡಿದ್ರೆ ಸ್ಪರ್ಧೆ ಮಾಡೋ ಸುಳಿವು ನೀಡಿದ್ದಾರೆ. ಜೊತೆಗೆ ರಘುನಂದನ್ ರಾಮಣ್ಣ, ಮಾಜಿ ಎಂಎಲ್‌ಎ ಅಶ್ವಥ್ ಹೆಸರು ಕೂಡ ಕೇಳಿಬರ್ತಿದೆ. ಆದ್ರೆ, ಮೈತ್ರಿ ಪಕ್ಷದ ಅಭ್ಯರ್ಥಿ ಯಾರಾಗ್ತಾರೆ ಎನ್ನುವುದರ ಮೇಲೆ ಯಾರನ್ನು ಅಭ್ಯರ್ಥಿ ಮಾಡ್ಬೇಕು ಎಂದು ಕಾಂಗ್ರೆಸ್ ತೀರ್ಮಾನ ತೆಗೆದುಕೊಳ್ಳಲಿದೆ. ಇನ್ನು ನಾವೇನು ಶಸ್ತ್ರ ಸನ್ಯಾಸ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳುವ ಮೂಲಕ ಡಿಸಿಎಂಗೆ ಕೌಂಟರ್ ಕೊಟ್ಟಿದ್ದಾರೆ.