ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಅವರು ಮಂಡ್ಯದ ಸಂಸದೆ ಸುಮಲತಾರನ್ನು (Sumalatha Ambarish) ಇಂದು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.
Advertisement
ಈ ಬಾರಿ ಬಿಜೆಪಿಯಿಂದ ಸುಮಲತಾ ಅವರಿಗೆ ಮಂಡ್ಯ (Mandya) ಟಿಕೆಟ್ (Ticket) ಸಿಗಲಿದೆ ಎಂದು ಹೇಳಲಾಗಿತ್ತು. ಸುಮಲತಾ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ, ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ಸಿಗಲಿಲ್ಲ.
Advertisement
Advertisement
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಆಗುತ್ತಿದ್ದಂತೆಯೇ ತಟಸ್ಥ ನಿಲುವನ್ನು ಸುಮಲತಾ ತಾಳಿದರು. ಯಾವುದೇ ಸಭೆಯಲ್ಲೂ ಅವರು ಭಾಗಿಯಾಗಿರಲಿಲ್ಲ. ತಮ್ಮ ಬೆಂಬಲಿಗರ ಸಭೆ ಕರೆದು, ತೀರ್ಮಾನ ತಗೆದುಕೊಳ್ಳೋದಾಗಿ ತಿಳಿಸಿದ್ದರು. ನಾಳೆ ಅವರು ಬೆಂಬಲಿಗರ ಸಭೆ ಕರೆದಿದ್ದಾರೆ. ಅದಕ್ಕೂ ಮುನ್ನ ವಿಜಯೇಂದ್ರ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
Advertisement
ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗಿದ್ದರಿಂದ, ಸುಮಲತಾ ಅವರನ್ನು ಭೇಟಿ ಮಾಡುತ್ತೀರಾ ಎಂದು ವಿಜಯೇಂದ್ರ ಅವರಿಗೆ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮಾಧ್ಯಮಗಳು ಪದೇ ಪದೇ ಪ್ರಶ್ನೆ ಮಾಡುತ್ತಿದ್ದವು. ಮೊದಲ ಭಾಗಿವಾಗಿ ವಿಜಯೇಂದ್ರ ಭೇಟಿ ಮಾಡಿದ್ದಾರೆ.