ದಾವಣಗೆರೆ: ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು ಎಂದು ಸಂಸದ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದಲ್ಲಿ ಬಿಟ್ ಕಾಯಿನ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ ಎಂಬ ವಿಚಾರ ಕುರಿತಂತೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು, ಚುನಾವಣೆಗೆ ಇನ್ನೂ ಒಂದುವರೆ ವರ್ಷಗಳ ಕಾಲ ಸಮಯವಿದೆ. ಅಲ್ಲಿಯವರೆಗೂ ಬೊಮ್ಮಯಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ವಿಚಾರ, ಇದೆಲ್ಲ ಕಾಂಗ್ರೆಸ್ ಪಕ್ಷದ ಪಿತೂರಿ ಅಷ್ಟೇ. ಈ ರೀತಿ ಹೇಳಿಕೆ ಕೊಡುವ ಮೂಲಕ ಆಡಳಿತವನ್ನು ಕುಂಠಿತ ಮಾಡುವ ಪ್ರಯತ್ನವನ್ನು ಕಾಂಗ್ರೆಸ್‍ನವರು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Advertisement
Advertisement
ಇದೇ ವೇಳೆ ದಲಿತ ನಾಯಕ ಸಿಎಂ ಆಗುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಯಾರು ಸಿಎಂ ಆಗುತ್ತಾರೆ ಎನ್ನುವುದನ್ನು ಜನ ನಿರ್ಧಾರ ಮಾಡುತ್ತಾರೆ. ಇನ್ನೂ ಈಗ ಚುನಾವಣೆ ಬಂದಿಲ್ಲ. ಸಿದ್ದರಾಮಯ್ಯ, ಡಿಕೆಶಿ ಹಾಗೂ ಕಾಂಗ್ರೆಸ್ ಮುಖಂಡರ ನಡುವಿನ ಗೊಂದಲ ಇದರಲ್ಲಿ ಕಾಣಿಸುತ್ತಿದೆ. ಕಾಂಗ್ರೆಸ್ ಸಂಸೃತಿ ಕಾಲೇಳೆಯುವುದು ಅದು ಇದರಲ್ಲಿ ಎಂಬುವುದು ಗೊತ್ತಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಯಾವುದೇ ಕಾಯಿನ್ ವಿಚಾರಕ್ಕೂ, ನನ್ನ ಮಗನಿಗೂ ಸಂಬಂಧ ಇಲ್ಲ: ಎನ್.ಎ.ಹ್ಯಾರಿಸ್
Advertisement
Advertisement
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬಿಟ್ ಕಾಯಿನ್ ಬಗ್ಗೆ ಮಾತನಾಡಿದ ಅವರು, ಇದು ಬೊಮ್ಮಾಯಿ ಅವರು ಸಿಎಂ ಆದ ನಂತರ ನಡೆಯುತ್ತಿರುವ ಘಟನೆ ಅಲ್ಲ. ಮೂನ್ನಾಲ್ಕು ವರ್ಷಗಳ ಹಿಂದೆ ನಡೆದ ಘಟನೆಯಾಗಿದೆ. ಬಿಟ್ ಕಾಯನ್ ಬಗ್ಗೆ ಕಾಂಗ್ರೆಸ್ ಮುಖಂಡರು ಆರೋಪ ಮಾಡುತ್ತಿದ್ದಾರೆ. ಆ ಆರೋಪಗಳಿಗೆ ಯಾವುದೇ ಆಧಾರ ಇಲ್ಲ. ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ
ವಿಚಿತ್ರ ಏನು ಅಂದ್ರೆ ಕಾಂಗ್ರೆಸ್ ಮುಖಂಡರೇ ಅದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಈ ಕುರಿತಂತೆ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತನಿಖೆ ನಡೆಸಲು ಸೂಚಿಸಿದ್ದಾರೆ. ಇದರಲ್ಲಿ ಯಾರೇ ಪ್ರಭಾವಿಗಳಿದ್ದರು ಅವರ ವಿರುದ್ಧ ತನಿಖೆಯಾಗುತ್ತದೆ. ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.