ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದರ್ಶನ್‌ಗೆ (Darshan) ಇಂದು (ಅ.30) ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಖುಷಿಯಲ್ಲಿ ಬಳ್ಳಾರಿಗೆ ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ (Vijayalakshmi) ಆಗಮಿಸಿದ್ದಾರೆ.
ಬೇಲ್ ಸಿಕ್ಕ ಬೆನ್ನಲ್ಲೇ ಜೈಲಿಗೆ ಆಗಮಿಸಿದ ಪತ್ನಿಯನ್ನು ನೋಡಲು ಹೈ ಸೆಕ್ಯೂರಿಟಿ ಸೆಲ್‌ನಿಂದ ತೀವ್ರ ಬೆನ್ನು ನೋವಿನಿಂದಲೇ, ದರ್ಶನ್ ಆಗಮಿಸಿದ್ದಾರೆ. ಜೈಲಿನ ಕೊಠಡಿಯಲ್ಲಿ ಕೆಲ ಕಾಲ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಪತ್ನಿ ಜೊತೆ ದರ್ಶನ್ ಚರ್ಚಿಸಿದ್ದಾರೆ. ಈ ವೇಳೆ, ಪತಿಗೆ ಚಾಮುಂಡೇಶ್ವರಿ ದೇವಿ ಪ್ರಸಾದ ನೀಡಿದ್ದಾರೆ.
ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.