ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್ ಸೇರಿ 7 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇದೀಗ ದರ್ಶನ್ (Darshan) ಪತ್ನಿ ಕೂಡ ರಿಯಾಕ್ಟ್ ಮಾಡಿದ್ದಾರೆ. ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಹಿಡಿದ ಫೋಟೋ ಪೋಸ್ಟ್ ಮಾಡಿ ಖುಷಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಅಲ್ಲು ಅರ್ಜುನ್ ಅರೆಸ್ಟ್: ಈ ಘಟನೆಯಲ್ಲಿ ನಟನಾಗಿ ಅವರ ಪಾತ್ರವಿಲ್ಲ ಎಂದ ತಾರಕ್ ಪೊನ್ನಪ್ಪ
ದರ್ಶನ್‌ಗೆ ಜಾಮೀನು ಸಿಕ್ಕ ಬೆನ್ನಲ್ಲೇ ವಿಜಯಲಕ್ಷ್ಮಿ (Vijayalakshmi) ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಹಿಡಿದ ಫೋಟೋ ವಿಜಯಲಕ್ಷ್ಮಿ ಇನ್ಸ್ಟಾಗ್ರಾಂ ಪೋಸ್ಟ್ ಮಾಡಿದ್ದಾರೆ. ದೇವರಿಗೆ ಪ್ರಾರ್ಥನೆ ಫಲಿಸಿತು ಎಂಬ ಅರ್ಥದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.