Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನುರಿತ ಕಲಾವಿದರ ಸಂಗಮದಲ್ಲಿ ಮೂಡಿದ ವಿಕಲ್ಪ ಚಿತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನುರಿತ ಕಲಾವಿದರ ಸಂಗಮದಲ್ಲಿ ಮೂಡಿದ ವಿಕಲ್ಪ ಚಿತ್ರ

Cinema

ನುರಿತ ಕಲಾವಿದರ ಸಂಗಮದಲ್ಲಿ ಮೂಡಿದ ವಿಕಲ್ಪ ಚಿತ್ರ

Public TV
Last updated: December 24, 2025 5:57 pm
Public TV
Share
4 Min Read
vikalpa movie
SHARE

ಕನ್ನಡ ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ತಮ್ಮ ಸ್ಟಾರ್ ಕಾಸ್ಟಿಂಗ್, ಬಿಗ್ ಬಜೆಟ್ ಮೂಲಕ ಸದ್ದು ಮಾಡಿದರೆ, ಇನ್ನು ಕೆಲವು ಸಿನಿಮಾಗಳು ತಮ್ಮ ಕಂಟೆಂಟ್, ಟೈಟಲ್ ಮೂಲಕವೇ ಸಿನಿಪ್ರಿಯರನ್ನು ಸದ್ದಿಲ್ಲದೆ ಸೆಳೆಯಲು ಯಶಸ್ವಿಯಾಗಿಬಿಡುತ್ತವೆ. ಇತ್ತೀಚೆಗೆ ಹೀಗೆ ಅಂಥದ್ದೇ ಕಂಟೆಂಟ್ ಮತ್ತು ಟೈಟಲ್ ಮೂಲಕವೇ ಸ್ಯಾಂಡಲ್‌ವುಡ್‌ ಸಿನಿಪ್ರಿಯರನ್ನು ಸೆಳೆಯುತ್ತಿರುವ ಚಿತ್ರ ವಿಕಲ್ಪ. ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ವಿಕಲ್ಪ ಒಂದು ಸೈಕಾಲಜಿಕಲ್-ಥ್ರಿಲ್ಲರ್ ಕಥಾಹಂದರದ ಚಿತ್ರ. ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು, ತುಮುಲ-ತಲ್ಲಣಗಳನ್ನು ಈ ಚಿತ್ರದ ಮೂಲಕ ತೆರೆ ಮೇಲೆ ತರುತ್ತಿದ್ದಾರೆ ಯುವ ನಟ ಕಂ ನಿರ್ದೇಶಕ ಪೃಥ್ವಿರಾಜ್ ಪಾಟೀಲ್.

ಕನ್ನಡ ಚಿತ್ರರಂಗದಲ್ಲಿ ಪ್ರತಿವರ್ಷ ನೂರಾರು ಸಿನಿಮಾಗಳು ಬಿಡುಗಡೆಯಾಗಿ ತೆರೆಗೆ ಬರುತ್ತಿವೆ. ಆದರೆ, ಇಷ್ಟೊಂದು ಸಿನಿಮಾಗಳ ಪೈಕಿ ಸೈಕಾಲಜಿಕಲ್ ಥ್ರಿಲ್ಲರ್ ಸಿನಿಮಾಗಳ ಸಂಖ್ಯೆ ಮಾತ್ರ ಕೇವಲ ಬೆರಳೆಣಿಕೆಯಷ್ಟು ಮಾತ್ರ ಎಂದೇ ಹೇಳಬಹುದು. ಅಂಥ ಬೆರಳೆಣಿಕೆಯ ವಿರಳ ಸಿನಿಮಾಗಳ ಸಾಲಿಗೆ ಸೇರುವ ಚಿತ್ರವೇ ವಿಕಲ್ಪ. ಬಹುತೇಕ ಯುವ ಮನಸ್ಸುಗಳೇ ಸೇರಿ ಮಾಡಲು ಹೊರಟಿರುವ ವಿಕಲ್ಪ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಅಪರೂಪದ ಚಿತ್ರವಾಗಿ ನಿಲ್ಲಲಿದೆ ಎಂಬುದು ಚಿತ್ರತಂಡದ ನಿರೀಕ್ಷೆ. ವಿಕಲ್ಪ ಎಂದರೆ ವಾಸ್ತವ ಮತ್ತು ಕಲ್ಪನೆಗಳ ನಡುವಿನ ಒಂದು ಸ್ಥಿತಿ ಎಂದರ್ಥ. ನಮ್ಮ ಚಿತ್ರದ ಶೀರ್ಷಿಕೆಯ ಪ್ರಕಾರ, ಇದೊಂದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕಥೆ ಎಂದೆನಿಸಿದರೂ, ಇದು ಒಂದು ಸಂಪೂರ್ಣ ಥ್ರಿಲ್ಲರ್ ಚಿತ್ರ ಎನ್ನುವುದು ವಿಶೇಷ. ಸೈಕಾಲಜಿಕಲ್-ಥ್ರಿಲ್ಲರ್ ಅಂಶಗಳ ಜೊತೆಗೆ ನವಿರಾದ ಹಾಸ್ಯ ಮತ್ತು ಮನೋರಂಜನೆಗೆ ಹೆಚ್ಚಿನ ಒತ್ತನ್ನು ಕೊಟ್ಟು ಇಡೀ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ಈ ಚಿತ್ರಕ್ಕೆ ಚಿತ್ರದ ಕಥೆಯೆ ಹೀರೋ. ಇಲ್ಲಿ ಪ್ರತಿ ಪಾತ್ರಗಳೂ ಮಾತನಾಡುತ್ತವೆ. ಪ್ರತಿ ಪಾತ್ರಗಳೂ ನೋಡುಗರ ಮನಮುಟ್ಟುತ್ತವೆ ಎಂದು ಹೇಳುತ್ತಾರೆ ವಿಕಲ್ಪದ ನಿರ್ದೇಶಕ ಪೃಥ್ವಿರಾಜ್ ಪಾಟೀಲ್.

ಸುಮಾರು ಎರಡು ದಶಕಗಳಿಗೂ ಹೆಚ್ಚಿನ ಕಾಲ ಹವ್ಯಾಸಿ ರಂಗಭೂಮಿಯಲ್ಲಿ ಅನುಭವಪಡೆದಿರುವ, ಪ್ರತಿಷ್ಠಿತ ಬಹುರಾಷ್ಟ್ರೀಯ ಐಟಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪೃಥ್ವಿರಾಜ್ ಪಾಟೀಲ್, ತಮ್ಮ ಪರಿಕಲ್ಪನೆಯನ್ನು ವಿಕಲ್ಪ ಚಿತ್ರದ ಮೂಲಕ ತೆರೆಮೇಲೆ ತರುತ್ತಿದ್ದಾರೆ. ಸುರೂಸ್ ಟಾಕೀಸ್ ಸಂಸ್ಥೆಯ ಅಡಿಯಲ್ಲಿ ಇಂದಿರಾ ಶಿವಸ್ವಾಮಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಚಿತ್ರ ಇದಾಗಿದ್ದು, ಈ ಚಿತ್ರದಲ್ಲಿ ನಿರ್ದೇಶಕ ಪೃಥ್ವಿರಾಜ್ ಪಾಟೀಲ್ ಅವರೇ ತೆರೆಮೇಲೂ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದು ಚಿತ್ರಕ್ಕೆ ಕಥೆ ಮತ್ತು ಬರವಣಿಗೆಯೇ ಮುಖ್ಯ ಎಂದು ಅಪೇಕ್ಷಿಸುವ ಕನ್ನಡದ ಎಲ್ಲಾ ಪ್ರಬುದ್ಧ ಚಿತ್ರ ಪ್ರೇಕ್ಷಕರ ಪಾಲಿಗೆ ಈ ಚಿತ್ರ ಒಂದು ಉಡುಗೊರೆಯಾಗಿ ತೆರೆ ಮೇಲೆ ಮೂಡಿಬರುತ್ತಿದೆ ಎಂಬುದು ನಿರ್ದೇಶಕರ ಮಾತು.

ವಿಕಲ್ಪ ಚಿತ್ರದ ಮತ್ತೊಂದು ವಿಶೇಷತೆಯೆಂದರೆ, ಅನೇಕ ನುರಿತ ಮಾನಸಿಕ ವೈದ್ಯರ ಸಲಹೆಯ ಮೇರೆಗೆ ಈ ಚಿತ್ರದ ಹಲವು ಸನ್ನಿವೇಶಗಳನ್ನು ಚಿತ್ರಿಸಲಾಗಿರುವುದು. ಚಿತ್ರದ ದೃಶ್ಯಗಳು ಸಹಜತೆಗೆ ಅತ್ಯಂತ ಹತ್ತಿರವಾಗಿರಬೇಕು ಎಂಬ ಆಶಯದಿಂದ ಚಿತ್ರತಂಡ ಇಂಥದ್ದೊಂದು ಕೆಲಸ ಮಾಡಿದೆ. ಬೆಂಗಳೂರು, ತೀರ್ಥಹಳ್ಳಿ, ಸಾಗರ, ಶಿರಸಿ, ಕುಂದಾಪುರ, ಯಲ್ಲಾಪುರ ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದ್ದು, ಸಿಂಗಾಪುರ, ನೆದರ್ಲ್ಯಾಂಡ್ ಸೇರಿದಂತೆ ವಿದೇಶಗಳಲ್ಲೂ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಪೃಥ್ವಿರಾಜ್ ಪಾಟೀಲ್, ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಗಣಪತಿ ವಡ್ಡಿನಗದ್ದೆ, ಸ್ವರೂಪ್ ಬಚ್ಚ್, ಪೂಜಾ ಬಚ್ಚ್, ಜಯಂತ್ ಡೇವಿಡ್, ಡಾ. ಪ್ರಕೃತಿ, ಮಾಸ್ಟರ್ ಆಯುಷ್ ಸಂತೋಷ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಪ್ರಸಿದ್ದ ನಟಿಯರಲ್ಲೊಬ್ಬರಾದ ಹರಿಣಿ ಶ್ರೀಕಾಂತ್ ಈ ಚಿತ್ರದ ವಿಭಿನ್ನ ಮತ್ತು ವಿಶೇಷವಾದ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಜೊತೆಗೆ ಮಲೆನಾಡಿನ ಪ್ರಸಿದ್ದ ರಂಗಭೂಮಿ ಕಲಾವಿದ ಗಣಪತಿ ಹಿತ್ತಲಕೈ, ಪ್ರಜ್ಞಾ ಗಣಪತಿ, ಮಾಧವ ಶರ್ಮಾ, ಗಿರೀಶ್ ಹೆಗಡೆ, ಗಣಪತಿ ಎ.ಆರ್, ರಾಜ್ಯ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆ ಮುಂತಾದ ದೊಡ್ಡ ಕಲಾವಿದರ ತಾರಾಗಣವೇ ವಿಕಲ್ಪದಲ್ಲಿರುವುದು ಮತ್ತೊಂದು ವಿಶೇಷ.

ಚಿತ್ರಕ್ಕೆ ಮಿಥುನ್ ತೀರ್ಥಹಳ್ಳಿ ಸಹ ನಿರ್ದೇಶನ ಮಾಡಿದ್ದಾರೆ. ವಿಕಲ್ಪ ಸುಂದರ ದೃಶ್ಯಗಳನ್ನು ಅಭಿರಾಮ್ ಗೌಡ ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರೆ, ದಕ್ಷಿಣ ಭಾರತದ ಖ್ಯಾತ ಸಂಕಲನಕಾರ ಸುರೇಶ್ ಆರುಮುಗಮ್ ಚಿತ್ರಕ್ಕೆ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ವಿಕಲ್ಪದ ವಿಭಿನ್ನ ಹಾಡುಗಳಿಗೆ ಸಂವತ್ಸರ ಸಂಗೀತ ಸಂಯೋಜಿಸಿದ್ದು, ಪೃಥ್ವಿರಾಜ್ ಪಾಟಿಲ್ ಮತ್ತು ಕೌಂಡಿನ್ಯ ಕುಡ್ಲುತೋಟ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಸಿದ್ದಾರ್ಥ್ ಬೆಳ್ಮಣ್ಣು, ಸಂವತ್ಸರ, ಶ್ರೀರಂಜಿನಿ, ಇಂಚರ ಮೊದಲಾದ ಗಾಯಕರ ಧ್ವನಿಯಲ್ಲಿ ವಿಕಲ್ಪದ ಹಾಡುಗಳು ಮೂಡಿಬಂದಿವೆ. ಸದ್ಯ ವಿಕಲ್ಪದ ಚಿತ್ರೀಕರಣ ಮುಕ್ತಾಯಗೊಂಡು, ಚಿತ್ರದ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ವಿಕಲ್ಪ ಚಿತ್ರದ ನಿರೂಪಣೆ, ಅತ್ಯುತ್ತಮ ಬರವಣಿಗೆ, ಸೀಟ್ ಎಡ್ಜಿಗೆ ಕೂರಿಸುವಂತಹ ಥ್ರಿಲ್ಲಿಂಗ್ ಚಿತ್ರಕಥೆ, ತೀರಾ ಆತ್ಮೀಯರು ಎನಿಸುವಂತಹ ನೈಜ ಪಾತ್ರಗಳು, ಕಚಗುಳಿ ಇಡುವ ನೈಜ ಹಾಸ್ಯ, ಕಲ್ಟ್ ಹಾಡುಗಳು, ಹೀಗೆ ಒಂದಷ್ಟು ಹೊಸ ವಿಚಾರಗಳನ್ನು ನಿಜವಾಗಿಯೂ ಹೊಸತನ ಬಯಸುವ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ವಿಕಲ್ಪ ಚಿತ್ರತಂಡವು ತೀರಾ ವಿನಯ ಮತ್ತು ಜವಾಬ್ದಾರಿಯಿಂದ ಪ್ರೇಕ್ಷಕರನ್ನು ರಂಜಿಸುವ ಆತ್ಮವಿಶ್ವಾಸವನ್ನು ಹೊಂದಿದೆ. ಆದಷ್ಟು ಬೇಗ ವಿಕಲ್ಪವನ್ನು ಪ್ರೇಕ್ಷಕರ ಮುಂದೆ ತರಲು ಕಾತುರರಾಗಿದ್ದೇವೆ ಎಂಬುದು ಚಿತ್ರದ ನಿರ್ದೇಶಕ ಕಂ ನಟ ಪೃಥ್ವಿರಾಜ್ ಪಾಟೀಲ್ ಮತ್ತು ಚಿತ್ರತಂಡದ ಒಕ್ಕೊರಲ ಮಾತು.

TAGGED:kannada cinemasandalwoodVikalpa Movieಕನ್ನಡ ಸಿನಿಮಾವಿಕಲ್ಪ ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Gilli Nata 3
ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?
Cinema Latest Main Post TV Shows
Gilli
BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ
Bengaluru City Cinema Latest Main Post TV Shows
Ashwini Gouda 1
BBK Season 12 | ಬಿಗ್‌ ಮನೆಯ ಫೈಯರ್‌ ಬ್ರ್ಯಾಂಡ್‌ ಅಶ್ವಿನಿ ಗೌಡಗೆ 3ನೇ ಸ್ಥಾನ!
Cinema Latest Main Post TV Shows
Gilli Kavya
ಗಿಲ್ಲಿ ಹೇಳಿದಾಗ ಕಾಣಿಸಿಕೊಳ್ಳೋಕೆ ಇದು ಕಪಲ್‌ ಶೋ ಅಲ್ಲ – ಆಚೆ ಬರ್ತಿದ್ದಂತೆ ಕ್ಲ್ಯಾರಿಟಿ ಕೊಟ್ಟ ಕಾವು!
Bengaluru City Cinema Latest Top Stories TV Shows

You Might Also Like

Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
2 hours ago
Ind vs NZ 1
Cricket

ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Public TV
By Public TV
4 hours ago
Kavya 01
Bengaluru City

BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?

Public TV
By Public TV
4 hours ago
Raghu
Cinema

BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌

Public TV
By Public TV
6 hours ago
AR Rahman 2
Bollywood

ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ

Public TV
By Public TV
6 hours ago
Dhanush Gowda
Cinema

BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?