ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ವಿಕ್ರಮ್ ದೇವ್ ದತ್ ಅವರನ್ನು ಏರ್ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕನಾಗಿ ಮಂಗಳವಾರ ಕೇಂದ್ರ ಸರ್ಕಾರ ನೇಮಿಸಿದೆ.
ವಿಕ್ರಮ್ ದೇವ್ ದತ್ ಅವರು ಎಜಿಎಮ್‌ಯುಟಿ(ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ) ಕೇಡರ್‌ನ 1993-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರನ್ನು ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿ ಹಾಗೂ ವೇತನದಲ್ಲಿ ಏರ್ ಇಂಡಿಯಾ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ
Advertisement
Advertisement
ದತ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸರ್ಕಾರದಲ್ಲಿ ಹಣಕಾಸು ಪ್ರಧಾನ ಕಾರ್ಯದರ್ಶಿಯಾಗಿ, ಗೋವಾ ಸರ್ಕಾರದಲ್ಲಿ ಪ್ರವಾಸೋದ್ಯಮ ಕಾರ್ಯದರ್ಶಿಯಾಗಿ ಹಾಗೂ ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಇದನ್ನೂ ಓದಿ: ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ
Advertisement
ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಚಂಚಲ್ ಕುಮಾರ್ ಅವರನ್ನು ನೇಮಿಸಲಾಗಿದೆ. ಕುಮಾರ್ 1992-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಬಿಹಾರದಲ್ಲಿ ಅವರ ಕೇಡರ್ ರಾಜ್ಯವನ್ನು ನಿಯೋಜಿಸಲಾಗಿದೆ.