ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyaan Vikram) ನಿನ್ನೆಯಷ್ಟೇ ಸಾಹಸ ಸನ್ನಿವೇಶದ ರಿಹರ್ಸಲ್ ವೇಳೆ ಪಕ್ಕೆಲುಬು (Ribs) ಮುರಿದುಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆಯಿಂದ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಶಸ್ತ್ರ ಚಿಕಿತ್ಸೆ (Surgery) ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವರದಿ ಆಗಿದೆ.
‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan 2) ಸಿನಿಮಾದ ಪ್ರಚಾರ ಮುಗಿಸಿ ಮತ್ತೆ ಹೊಸ ಸಿನಿಮಾದ ಚಿತ್ರೀಕರಣಕ್ಕೆ ವಿಕ್ರಮ್ ರೆಡಿಯಾಗುತ್ತಿದ್ದರು. ಸದ್ಯ ಅವರು ‘ತಂಗಲಾನ್’ (Thangalaan Film) ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ರಿಹರ್ಸಲ್ ವೇಳೆ ಬಿದ್ದು ವಿಕ್ರಮ್ ಪಕ್ಕೆಲುಬಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್
‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ವಿಕ್ರಮ್ಗೆ ಗಾಯಗಳಾಗಿರೋದ್ರಿಂದ ಶೂಟಿಂಗ್ ನಿಲ್ಲಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕೆ ಮತ್ತೆ ಶೂಟಿಂಗ್ ಶುರುವಾಗುತ್ತದೆ. ಈ ಹಿಂದೆ ಕೂಡ ಇದೇ ಸಿನಿಮಾ ಸೆಟ್ನಲ್ಲಿ ವಿಕ್ರಮ್ಗೆ ಪೆಟ್ಟಾಗಿ ಕೆಲವು ದಿನಗಳ ಕಾಲ ಶೂಟಿಂಗ್ ನಿಂತಿತ್ತು. ಇದರಿಂದ ವಿಕ್ರಮ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಕ್ರಮ್ ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ವಿಕ್ರಮ್ಗೆ ಆಸ್ಪತ್ರೆಯಲ್ಲೇ ಇದ್ದಾರೆ.
ಕೋಲಾರ ಚಿನ್ನದ ಗಣಿಯ ಕಾರ್ಮಿಕರ ಸುತ್ತಾ ‘ತಂಗಲಾನ್’ ಸಿನಿಮಾ ಮೂಡಿ ಬರ್ತಿದೆ. ನಿರ್ದೇಶಕ ಪಾ.ರಂಜಿತ್ ಕೋಲಾರದಲ್ಲಿ ನಡೆದ ನಿಜವಾದ ಘಟನೆಗಳನ್ನು ಆಧರಿಸಿ, ಆ ಬಗ್ಗೆ ಸಂಶೋಧನೆ ನಡೆಸಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನೂರು ವರ್ಷಗಳ ಹಿಂದೆ ಅಲ್ಲಿನ ಗಣಿ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು ಎನ್ನುವುದರ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.