ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಇದೇ ವಾರ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಭಾರತವೂ ಸೇರಿದಂತೆ 27 ದೇಶಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, 3500 ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ನೋಡಬಹುದು ಎಂದಿದ್ದಾರೆ ನಿರ್ಮಾಪಕ ಜಾಕ್ ಮಂಜು. ಈಗಾಗಲೇ ಬಹುತೇಕ ಕಡೆ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆಯಂತೆ.
ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ 3500ಕ್ಕೂ ಹೆಚ್ಚು ಸ್ಕ್ರಿನ್ ಗಳಲ್ಲಿ ಬಿಡುಗಡೆ ಆಗುತ್ತಿದ್ದು, ಕರ್ನಾಟಕದಲ್ಲಿ 425ಕ್ಕೂ ಅಧಿಕ ಹೆಚ್ಚು ಥಿಯೇಟರ್ ಗಳಲ್ಲಿ ರಿಲೀಸ್ ಆಗಲಿದೆ. ಬಾಲಿವುಡ್ ನಲ್ಲಿ 900 ಥಿಯೇಟರ್ಸ್, ಟಾಲಿವುಡ್ ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ಸ್ ವಿದೇಶಗಳಲ್ಲಿ 800 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಜಾಕ್ ಮಂಜು. ಇದನ್ನೂ ಓದಿ:ಬನ್ಸಾಲಿ ನಿರ್ದೇಶನದಲ್ಲಿ ಬಹುಭಾಷಾ ನಟಿ ಅದಿತಿ ರಾವ್
ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಮತ್ತು ಹಾಡುಗಳು ಸಖತ್ ವೈರಲ್ ಆಗಿವೆ. ರಾ ರಾ ರಕ್ಕಮ್ಮ ಹಾಡಂತೂ ಅಷ್ಟೂ ಭಾಷೆಗಳಲ್ಲೂ ಕ್ರೇಜ್ ಕ್ರಿಯೇಟ್ ಮಾಡಿದೆ. ಜುಲೈ 28ರಂದು 2 ಡಿ ಮತ್ತು 3 ಡಿಯಲ್ಲಿ ವಿಕ್ರಾಂತ್ ರೋಣ ತೆರೆಗೆ ಬರುತ್ತಿದೆ. ಮತ್ತೊಂದು ಕುತೂಹಲದ ಸಂಗತಿ ಅಂದರೆ, ಪಾಕಿಸ್ತಾನದಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ ಚಿತ್ರತಂಡ.