ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಇದೇ ಶುಕ್ರವಾರ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಕೆಲವು ಕಡೆ ಸ್ಪೆಷಲ್ ಶೋ ಅನ್ನು ಆಯೋಜನೆ ಮಾಡಿದೆ ಚಿತ್ರತಂಡ. ನವ ದೆಹಲಿಯಲ್ಲಿ ಸಂಸದರಿಗೆ ಮತ್ತು ಸರಕಾರಿ ಅಧಿಕಾರಿಗಳಿಗೆ ಸ್ಪೆಷಲ್ ಶೋ ಆಯೋಜನೆ ಮಾಡಿದ್ದು, ಈ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿದ್ದಾರೆ. ಸಿನಿಮಾ ನೋಡುವುದಕ್ಕಾಗಿ ಕುತೂಹಲದಿಂದ ಕಾಯುತ್ತಿರುವುದಾಗಿ ಬರೆದುಕೊಂಡಿದ್ದಾರೆ.
Advertisement
ವಿಕ್ರಾಂತ್ ರೋಣ ಸಿನಿಮಾ ಪ್ರಪಂಚದ 27ದೇಶಗಳಲ್ಲಿ ಪ್ರಿವ್ಯೂ ಆಗುತ್ತಿದೆ. ಜೊತೆಗೆ ದುಬೈನಲ್ಲಿ 5 ಭಾಷೆಯಲ್ಲೂ ಪ್ರದರ್ಶನವಾಗಲಿದೆ. ನೇಪಾಳ, ಪಾಕಿಸ್ತಾನದಲ್ಲೂ ವಿಕ್ರಾಂತ್ ರೋಣ ರಿಲೀಸಾಗುವ ಸಾಧ್ಯತೆಯಿದೆ. ಪ್ರಪಂಚದಾದ್ಯಂತ 3200ರಿಂದ 3500 ಚಿತ್ರಮಂದಿಗಳಲ್ಲಿ ವಿಕ್ರಾಂತ್ ರೋಣ ರಿಲೀಸಾಗುತ್ತಿದ್ದು, ಕರ್ನಾಟಕದಲ್ಲೇ 400ರಿಂದ 420 ಥೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ. ಇದನ್ನೂ ಓದಿ:`ವಿಕ್ರಾಂತ್ ರೋಣ’ ಚಿತ್ರದ ನಂತರ ಹೊಸ ಸಿನಿಮಾಗೆ ಕಿಚ್ಚ ಸುದೀಪ್ ಗ್ರೀನ್ ಸಿಗ್ನಲ್
Advertisement
Advertisement
ಕರ್ನಾಟಕಕ್ಕಿಂತ ತೆಲುಗು ರಾಜ್ಯಗಳಲ್ಲಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ನಿರ್ಮಾಪಕ ಜಾಕ್ ಮಂಜು ಹೇಳಿದ್ದು, ಈಗಾಗಲೇ ಬಹುತೇಕ ಕಡೆಗಳಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬಾಲಿವುಡ್‌ನಲ್ಲಿ 900 ಚಿತ್ರಮಂದಿರ, ಟಾಲಿವುಡ್‌ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ ಅಲ್ಲದೆ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ವಿಕ್ರಾಂತ್‌ರೋಣ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.