ಬೆಂಗಳೂರು: ಹಳೆಯ ದ್ವೇಷದಿಂದ ಗ್ರಾಮ ಪಂಚಾಯತಿ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೊಸಕೋಟೆಯಲ್ಲಿ (Hosakote) ನಡೆದಿದೆ.
ಮೃತನನ್ನು ಅಮೀರ್ ಖಾನ್ (45) ಎಂದು ಗುರುತಿಸಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯ್ತಿ ಸದಸ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಪೊಲಿಸ್ ಠಾಣಾ ವ್ಯಾಪ್ತಿಯ ಬೈಲ್ ನರಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮ ಪಂಚಾಯತಿ ಕಛೇರಿಯ ಬಳಿ ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಗ್ರಾಮದ ಮೆಹಬೂಬ್ ಇತರೊಂದಿಗೆ ಬಂದು ಲಾಂಗ್ ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇತ್ತ ಘಟನೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಮೀರ್ ಖಾನ್ ಅವರನ್ನು ಕೂಡಲೇ ಎಂ ವಿಜಿ ಆಸ್ಪತ್ರೆಗೆ ಸೇರಿಸಲು ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿ ಅಮೀರ್ ಖಾನ್ ಮೃತಪಟ್ಟರು.
ಘಟನಾ ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಎಂವಿಜೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದವನ ಮೇಲೆ ಕೊಲೆ ಆರೋಪದ ಸಂಚು – ಮಗುವನ್ನು ಬಾವಿಗೆ ಎಸೆದ ಅಪ್ರಾಪ್ತೆ