– 60ಕ್ಕೂ ಹೆಚ್ಚು ಮಂದಿ ಕೊಚ್ಚಿಹೋಗಿರುವ ಶಂಕೆ
ಡೆಹ್ರಾಡೂನ್: ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarkashi) ಭೀಕರ ಮೇಘಸ್ಫೋಟ (Cloudburst) ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಧರಾಲಿ (Dharali) ಗ್ರಾಮ ಕೊಚ್ಚಿ ಹೋಗಿದೆ.
ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರಿಗೇ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ
VIDEO | Uttarakhand: Cloudburst causes massive destruction in Dharali Uttarkashi. More details are awaited.#Cloudburst #UttarakhandNews
(Source: Third Party)
(Full video available on PTI Videos – https://t.co/n147TvrpG7) pic.twitter.com/vFx2rEUHvv
— Press Trust of India (@PTI_News) August 5, 2025
ಬೆಟ್ಟದ ಮೇಲಿನಿಂದ ಏಕಾಏಕಿ ನದಿಯಂತೆ ನೀರು ಹರಿದು ಬಂದು ಇಡೀ ಗ್ರಾಮವನ್ನೇ ಕೊಚ್ಚಿಕೊಂಡು ಹೋಗಿದೆ. ಪ್ರವಾಹದಲ್ಲಿ ಅನೇಕ ಮನೆಗಳು ಸರ್ವನಾಶವಾಗಿದ್ದು, ವಾಹನಗಳು ಹಾಗೂ ಅಂಗಡಿಗಳು ಸಹ ಧ್ವಂಸವಾಗಿದೆ. ಈ ಭೀಕರ ಪ್ರವಾಹದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎದೆ ಝಲ್ ಎನ್ನಿಸುವಂತಿದೆ. ಏಕಾಏಕಿ ಜಲಪ್ರಳಯ ಉಂಟಾದ ಪರಿಣಾಮ ಜನರು ಕಿರುಚಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ
ಸದ್ಯ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ದುರಂತದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಮೇಘಸ್ಫೋಟದಲ್ಲಿ ದೊಡ್ಡಮಟ್ಟದ ಹಾನಿಯಾಗಿರುವ ಮಾಹಿತಿ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್ ಪೋಸ್ಟ್