ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಪೋಸ್ಟ್: ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

Public TV
1 Min Read
KPL HALLE 1

ಕೊಪ್ಪಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಯುವಕನನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ.

ಶ್ಯಾಮೀದ್ ಮುಲ್ಲಾ ಗ್ರಾಮಸ್ಥರಿಂದ ಥಳಿತಕ್ಕೊಳಗಾದ ಯುವಕನಾಗಿದ್ದಾನೆ. ಈತ ಸಂವಿಧಾನವನ್ನು ಸುಟ್ಟಿರುವ ಕೆಲವು ಕಿಡಿಗೇಡಿಗಳ ವಿರುದ್ಧ ಲಿಂಗಸೂರಿನಲ್ಲಿ ನಡೆದ ಹೋರಾಟದ ಸುದ್ದಿಗೆ ಸಂಬಂಧಿಸಿದಂತೆ, ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನಕಾರಿಯಾಗಿ ಆಡಿಯೋ ಮಾಡಿ ಸಾಮಾಜಿಕ ಜಾಲತಾಣ ವಾಟ್ಸಪ್‍ನಲ್ಲಿ ಹರಿಯಲು ಬಿಟ್ಟಿದ್ದ.

vlcsnap 2018 08 25 13h04m29s921

ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ಸಾಕಷ್ಟು ವೈರಲ್ ಆಗುತ್ತಿದ್ದಂತಯೇ ಶ್ಯಾಮೀದ್‍ನನ್ನು ಯುವಕರು ಗುರುತಿಸಿದ್ದಾರೆ. ಅಂಬೇಡ್ಕರ್ ರವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದರಿಂದ ರೊಚ್ಚಿಗೆದ್ದು, ಮುದೇನೂರು ಗ್ರಾಮದಲ್ಲಿಯೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಶ್ಯಾಮಿದ್‍ನನ್ನು ತಾವರಾಗೇರಾ ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಕುಷ್ಟಗಿ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಸುರೇಶ್ ತಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *