ಚಿಕ್ಕೋಡಿ/ಬೆಳಗಾವಿ: ಪ್ರವಾಹದಿಂದ ತತ್ತರಿಸಿರುವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಹಿರಣ್ಯಕೇಶಿ ನದಿ ತೀರದ ಜನರಿಗೆ ಇದೀಗ ಮೊಸಳೆ ಕಾಟ ಎದುರಾಗಿದೆ.
ಕಳೆದ ಹಲವು ದಿನಗಳಿಂದ ನದಿ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕುರಣಿ ಗ್ರಾಮದ ಜನರಿಗೆ ಮೊಸಳೆ ಕಾಣಿಸಿಕೊಂಡಿದ್ದು, ಕೋಚರಿ ಬ್ಯಾರೇಜ್‍ನಿಂದ ಹೊಳೆಮ್ಮ ದೇವಿ ದೇವಸ್ಥಾನದ ವರೆಗಿನ ಬ್ಯಾರೇಜ್ ವರೆಗೆ ಮೊಸಳೆಗಳು ಇವೆ ಎನ್ನಲಾಗಿದೆ.
Advertisement
ಹೀಗಾಗಿ ನದಿ ತೀರದಲ್ಲಿ ಜಾನುವಾರುಗಳನ್ನು ತೊಳೆಯುವುದು ಹಾಗೂ ಬಟ್ಟೆಗಳನ್ನು ತೊಳೆಯಬೇಡಿ ಎಂದು ನೋಟಿಸ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಸಲಾಗಿದೆ. ಅಲ್ಲದೆ ವಿಶೇಷವಾಗಿ ಮೀನುಗಾರರು ನದಿಗೆ ಇಳೆಯದಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.
Advertisement
ಪ್ರವಾಹದ ಸಂದರ್ಭದಲ್ಲಿ ನದಿಯಲ್ಲಿನ ವಿಷ ಜಂತುಗಳು ಜಮೀನು ಹಾಗೂ ಗ್ರಾಮಗಳಿಗೆ ನುಗ್ಗಿದ್ದವು. ಪ್ರವಾಹ ತಗ್ಗಿ ಹಲವು ದಿನಗಳ ನಂತರ ಇದೀಗ ಹಿರಣ್ಯಕೇಶಿ ನದಿಯ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.