ChamarajanagarDistrictsKarnatakaLatestMain Post

ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್‌ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧಿ!

ಚಾಮರಾಜನಗರ: ದಲಿತ ಮಹಿಳೆ (Dalit Woman) ತೊಂಬೆ (ಟ್ಯಾಂಕ್‌) ನೀರು (Water) ಕುಡಿದರು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತೊಂಬೆಯ ನೀರು ಖಾಲಿ ಮಾಡಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವೀರಶೈವ ಬೀದಿಯಲ್ಲಿ ದಲಿತ ಮಹಿಳೆಯೊಬ್ಬರು ರಸ್ತೆ ಬದಿ ಇದ್ದ ತೊಂಬೆಯಲ್ಲಿ ನೀರು ಕುಡಿದಿದ್ದರು. ಈ ಕಾರಣಕ್ಕೆ ನೀರನ್ನು ಖಾಲಿ ಮಾಡಿ, ತೊಂಬೆಗೆ ಗೋಮೂತ್ರ ಸಿಂಪಡಿಸಿ ಸ್ವಚ್ಛ ಮಾಡಿದ್ದಾರೆ ಎಂದು ಬರೆದು ಪೋಸ್ಟ್‌ ಮಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ದೂರು ನೀಡಿದರೂ ಕ್ರಮ ಕೈಗೊಳ್ಳದ ಇನ್ಸ್‌ಪೆಕ್ಟರ್‌ ನಾಸಿರ್ ಹುಸೇನ್

ವೀಡಿಯೋ ವೈರಲ್ ಆಗುತ್ತಿದ್ದಂತೆ ಈ ಘಟನೆಯ ಕುರಿತಾಗಿ ಪರಿಶೀಲನೆ ನಡೆಸಲು ತಹಶೀಲ್ದಾರ್ ಮುಂದಾಗಿದ್ದಾರೆ. ಸದ್ಯ ಗ್ರಾಮಕ್ಕೆ RI ಮತ್ತು VA ಅವರನ್ನು ಕಳುಹಿಸಿ ವರದಿ ತರಿಸಿಕೊಂಡ ತಹಶೀಲ್ದಾರ್, ನಾಳೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಅಧಿಕಾರಿಗಳು ಕೊಟ್ಟ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಘಟನೆ ನಿಜವಾಗಿದ್ದರೆ ತಪ್ಪಿತಸ್ಥರ ವಿರುದ್ಧ ಎಫ್‍ಐಆರ್ (FIR) ದಾಖಲು ಮಾಡಲಾಗುತ್ತದೆ ಎಂದು ಚಾಮರಾಜನಗರ ತಹಶೀಲ್ದಾರ್ ಬಸವರಾಜ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದುವೆಗೆ ಯೋಧರನ್ನು ಆಹ್ವಾನಿಸಿದ ಜೋಡಿ – ಕರೆಯೋಲೆ ಕಂಡು ಖುಷಿ ಪಟ್ಟ ಇಂಡಿಯನ್ ಆರ್ಮಿ

Live Tv

Leave a Reply

Your email address will not be published. Required fields are marked *

Back to top button