ಬೆಳಗಾವಿ: ಜಾಮೀನು ಮಂಜೂರಾದರೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಹಿಂಡಲಗಾ ಜೈಲಿನಿಂದ ಇಂದು ಬಿಡುಗಡೆ ಮಾಡುವುದು ಅನುಮಾನ ಎಂದು ಹೇಳಲಾಗುತ್ತಿದೆ.
Advertisement
ವಿನಯ್ ಕುಲಕರ್ಣಿಯವರಿಗೆ ನಿನ್ನೆಯಷ್ಟೇ ಜಾಮೀನು ನೀಡಲಾಗಿದೆ. ಸಂಜೆ ಆರು ಗಂಟೆ ಒಳಗೆ ಕೋರ್ಟ್ ಆದೇಶದ ಪ್ರತಿ ಸಿಗದ ಹಿನ್ನೆಲೆ ಇಂದು ವಿನಯ್ ಕುಲಕರ್ಣಿ ಬಿಡುಗಡೆ ಡೌಟ್ ಎಂದು ಹೇಳಲಾಗುತ್ತಿದೆ. ಕೋರ್ಟ್ ಆದೇಶ ಪ್ರತಿಯನ್ನು ಇ-ಮೇಲ್ ಮಾಡದೆ, ಪೋಸ್ಟ್ ಮೂಲಕ ಕಳುಹಿಸಲಾಗಿದೆ ಎನ್ನಲಾಗುತ್ತಿದೆ. ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಜಾಮೀನು ಆದೇಶವನ್ನು ಖುದ್ದಾಗಿ ವಕೀಲರು ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್
Advertisement
Advertisement
ಇಂದು ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದರಿಂದ ಪೋಸ್ಟ್ ಮೂಲಕ ಬರಬೇಕಿರುವ ಆದೇಶ ಪ್ರತಿ ವಿಳಂಬವಾಗಿದೆ. 2020ರ ನವೆಂಬರ್ 5ರಂದು ಹಿಂಡಲಗಾ ಜೈಲು ಸೇರಿದ್ದ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕರೂ ಇಂದು ಬಿಡುಗಡೆ ಭಾಗ್ಯವಿಲ್ಲದ್ದಂತಾಗಿದೆ. ವಿನಯ್ ಕುಲಕರ್ಣಿಯವರನ್ನು ನಾಳೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಆಪ್ತ ವಲಯದಿಂದ ಮಾಹಿತಿ ದೊರೆತಿದೆ.