Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
Last updated: May 2, 2026 7:43 pm
Public TV
Share
3 Min Read
Vinay Kulkarni 1 1
SHARE

ಬೆಂಗಳೂರು/ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ (Vinay Kulkarni) ಶಾಸಕ ಸ್ಥಾನವನ್ನ ಅನರ್ಹಗೊಳಿಸಿ ರಾಜ್ಯ ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಈ ಮೂಲಕ ಧಾರವಾಡ (Dharwad) ವಿಧಾನಸಭಾ ಕ್ಷೇತ್ರ ತೆರವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಏ.15ರಿಂದಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.13ರಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ದೋಷಿ ಎಂದು ತೀರ್ಪು ಪ್ರಕಟಿಸಿ, ಏ.15ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆ ಇಂದು (ಮೇ 2) ಶಾಸಕ ಸ್ಥಾನ ರದ್ದಾಗಿರುವ ಬಗ್ಗೆ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ.

ನಿಯಮ ಏನು ಹೇಳುತ್ತೆ?
ಸಂವಿಧಾನದ ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 8, ಸಂವಿಧಾನದ 191(1ಇ) ವಿಧಿ ಪ್ರಕಾರ ಅನರ್ಹ ಮಾಡಲಾಗಿದೆ. ಜನಪ್ರತಿನಿಧಿ ಕಾಯ್ದೆ, 1951ರ ಪ್ರಕಾರ ಕೊಲೆ ಕೇಸ್‌ನಲ್ಲಿ ಶಾಸಕರೊಬ್ಬರು ಅಪರಾಧಿ ಎಂದು ಸಾಬೀತಾಗಿ ಕೋರ್ಟ್ ಶಿಕ್ಷೆ ಘೋಷಿಸಿದ ತಕ್ಷಣ, ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ. ಯಾವುದೇ ಶಾಸಕ ಅಥವಾ ಸಂಸದರು ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ, ಅವರಿಗೆ ನ್ಯಾಯಾಲಯವು ಕನಿಷ್ಠ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆ ವಿಧಿಸಿದರೆ, ಅವರು ತಕ್ಷಣವೇ ತಮ್ಮ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಕೊಲೆ ಪ್ರಕರಣಗಳಲ್ಲಿ (ಐಪಿಸಿ ಸೆಕ್ಷನ್ 302 ಅಥವಾ ಬಿಎನ್‌ಎಸ್ ಸೆಕ್ಷನ್ 103) ಅಪರಾಧ ಸಾಬೀತಾದರೆ ಕನಿಷ್ಠ ಶಿಕ್ಷೆ ಜೀವಾವಧಿ ಕಾರಾಗೃಹ ವಾಸ ಅಥವಾ ಗರಿಷ್ಠ ಮರಣದಂಡನೆ ಆಗಿರುತ್ತದೆ. ಇದು 2 ವರ್ಷಗಳಿಗಿಂತ ಬಹಳ ಹೆಚ್ಚಿರುವುದರಿಂದ, ಕೊಲೆ ಪ್ರಕರಣದಲ್ಲಿ ದೋಷಿಯಾದ ತಕ್ಷಣ ಶಾಸಕ ಸ್ಥಾನ ರದ್ದಾಗುತ್ತದೆ. ಇದನ್ನೂ ಓದಿ: ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಅನರ್ಹತೆಯ ಅವಧಿ ಎಷ್ಟು?
ಕೇವಲ ಶಾಸಕ ಸ್ಥಾನ ರದ್ದಾಗುವುದು ಮಾತ್ರವಲ್ಲ, ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ದಿನದಿಂದ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗೆ (ಶಾಸಕ, ಸಂಸದ ಇತ್ಯಾದಿ) ಸ್ಪರ್ಧಿಸುವಂತಿಲ್ಲ.

ಲಿಲಿ ಥಾಮಸ್ ಪ್ರಕರಣ (2013): ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಇಂತಹ ಶಿಕ್ಷೆಯಾದ ತಕ್ಷಣವೇ ಅನರ್ಹತೆ ಜಾರಿಗೆ ಬರುತ್ತದೆ, ಮೇಲ್ಮನವಿ ಸಲ್ಲಿಸಲು ಈ ಹಿಂದೆ ಇದ್ದ 3 ತಿಂಗಳ ರಕ್ಷಣೆ ಇರುವುದಿಲ್ಲ. ಪಕ್ಷಾಂತರಕ್ಕೆ ಸಂಬಂಧಿಸಿದ ಅನರ್ಹತೆಯನ್ನ ಸ್ಪೀಕರ್ ಅಥವಾ ಸದನದ ಅಧ್ಯಕ್ಷರು ನಿರ್ಧರಿಸುತ್ತಾರೆ. ಕ್ರಿಮಿನಲ್ ಶಿಕ್ಷೆಗೆ ಸಂಬಂಧಿಸಿದಂತೆ, ಅಪರಾಧ ಸಾಬೀತಾದ ತಕ್ಷಣ ಅನರ್ಹತೆ ಅನ್ವಯವಾಗುತ್ತದೆ.

ಈಗಾಗಲೇ ವಿನಯ್ ಕುಲಕರ್ಣಿ ಸೇರಿ ಇಬ್ಬರು ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ನೀಡಿ, ಅಮಾನತಿನಲ್ಲಿ ಇಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಏನಿದು ಪ್ರಕರಣ?
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಆದೇಶ ಪ್ರಕಟಿಸಿದ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.ಇದನ್ನೂ ಓದಿ: ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

 

TAGGED:bengalurudharwadMLAVinay Kulkarniyogesh gowdaಧಾರವಾಡಬೆಂಗಳೂರುಯೋಗೇಶ್ ಗೌಡವಿನಯ್ ಕುಲಕರ್ಣಿಶಾಸಕ ಸ್ಥಾನ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
10 minutes ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
29 minutes ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
46 minutes ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
60 minutes ago
Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
1 hour ago
BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?