ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ್ (Yogeeshgouda Goudar) ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ (Vinay Kulkarni) ಮತ್ತೆ ಆಘಾತವಾಗಿದೆ. ಜಾಮೀನು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ವಜಾ ಮಾಡಿದೆ.
ವಿಜಯ್ ಕುಲಕರ್ಣಿ ಅರ್ಜಿಗೆ ಸಿಬಿಐ (CBI) ಕೂಡ ಆಕ್ಷೇಪಣೆ ಎತ್ತಿತ್ತು. ಪ್ರಮುಖ ಸಾಕ್ಷಿಗಳು ಯಾರೆಂದು ಆರೋಪಿ ನಿರ್ಧರಿಸಲು ಸಾಧ್ಯವಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡದಂತೆ ವಕೀಲರು ಮನವಿ ಮಾಡಿದ್ರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್
ವಾದ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾ ಮಾಡಿದೆ. ಇದೇ ಪ್ರಕರಣದ ಮತ್ತೋರ್ವ ಆರೋಪಿ ಚಂದ್ರಶೇಖರ ಇಂಡಿಗೆ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಬಹುಭಾಷಾ ನಟಿಯ ಕಿಡ್ನಾಪ್, ರೇಪ್ ಕೇಸ್ – ನಟ ದಿಲೀಪ್ ಖುಲಾಸೆ, 6 ಮಂದಿ ದೋಷಿ
ಏನಿದು ಕೇಸ್?
ಯೋಗೀಶ್‌ಗೌಡ ಅವರನ್ನು 2016ರ ಜೂನ್ 15ರಂದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರ ಬಳಿಕ ಸಿಬಿಐ ಕೈಗೆತ್ತಿಕೊಂಡು ಶಾಸಕ ವಿನಯ್ ಕುಲಕರ್ಣಿ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿ ಬಂಧಿಸಿತ್ತು. ಸುಪ್ರೀಂ ಕೋರ್ಟ್ ಈ ಹಿಂದೆ ಜಾಮೀನು ರದ್ದುಪಡಿಸಿದ ಬಳಿಕ 2025ರ ಜೂನ್ 13ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇದನ್ನೂ ಓದಿ: ಕುಖ್ಯಾತ ನಕ್ಸಲ್ ನಾಯಕ ರಾಮಧೇರ್ ಮಜ್ಜಿ ಸೇರಿ 11 ಮಂದಿ ಶರಣು – ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ ನಕ್ಸಲ್ ಮುಕ್ತ?


