ವಿನಯ್ ರಾಜ್‌ಕುಮಾರ್ ನಟನೆಯ ‘ಪೆಪೆ’ ಸಿನಿಮಾದ ಜೇನು ಕುರುಬ ಸಾಂಗ್ ರಿಲೀಸ್

Public TV
1 Min Read
Vinay Rajkumar

ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆ್ಯಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ (Vinay Rajkumar) ‘ಪೆಪೆ’ (Pe Pe) ಸಿನಿಮಾ ಮೂಲಕ ಮಾಸ್ ಅವತಾರ ತಾಳಿದ್ದಾರೆ. ‘ಪೆಪೆ’ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ.‌ ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್‌ ನ್ಯೂಸ್-‌ ಶೋಭಿತಾ ಜೊತೆ ಸಮಂತಾ ಮಾಜಿ ಪತಿ ನಿಶ್ಚಿತಾರ್ಥ

vinay rajkumar

‘ಪೆಪೆ’ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್ ಅಡಿ ಚಿತ್ರ ಹಾಡೊಂದನ್ನು ಅನಾವರಣ ಮಾಡಿದೆ. ಪಿಆರ್‌ಕೆ ಆಡಿಯೋದಲ್ಲಿ ರಿಲೀಸ್ ಆಗಿರುವ ಗಾನಬಜಾನ ವಿಭಿನ್ನತೆಯಿಂದ ಕೂಡಿದೆ. ಜೇನು ಕುರುಬ ಬುಡಗಟ್ಟು ಜನಾಂಗದ ಆಚಾರ ವಿಚಾರ ತೆರೆದಿಡುವ ಗೀತೆಗೆ ಗಿರಿಜನ ಸಮಗ್ರ ಅಭಿವೃದ್ದಿ ಕಲಾ ಸಂಸ್ಥೆ ಹಾಗೂ ಜೆ.ಜಿ.ಕುಮಾರ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಟ್ಯೂನ್ ಹಾಕಿದ್ದಾರೆ. ಇನ್ನೂ ಚಿತ್ರತಂಡ ಖುದ್ದು ಹೇಳಿಕೊಂಡಂತೆ ಇಡೀ ಚಿತ್ರದ ಸೌಂಡ್ ಡಿಸೈನ್ ಬೇರೆ ರೀತಿ ಇದೆ ಅನ್ನೋದಕ್ಕೆ ಬಿಡುಗಡೆಯಾಗಿರುವ ಈ ಹಾಡು ಸೂಕ್ತ ಉದಾಹರಣೆ.

FotoJet 16

ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮೂಡಿ ಬರುತ್ತಿರುವ ‘ಪೆಪೆ’ ಒಂದು ರೀತಿ ಪರಿಪೂರ್ಣ ವಿಭಿನ್ನ ಸಿನಿಮಾ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

ಡಾ. ರವಿವರ್ಮ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್ ಸಿನಿ ವೆಂಚರ್, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

Share This Article