ಡೇಂಜರ್ ಝೋನ್‌ನಲ್ಲಿ ವಿನಯ್‌, ತುಕಾಲಿ ಸಂತು, ವರ್ತೂರು ಸಂತೋಷ್

Public TV
1 Min Read
vinay gowda 1

ಬಿಗ್ ಬಾಸ್ ಮನೆಯ (Bigg Boss Kannada 10) ಆಟಕ್ಕೆ ತೆರೆ ಬೀಳಲು ಕ್ಷಣಗಣನೆ ಶುರುವಾಗಿದೆ. ಈ ಬಾರಿ ಫಿನಾಲೆಗೆ 6 ಮಂದಿ ಸ್ಪರ್ಧಿಗಳು ಆಯ್ಕೆಯಾಗಿದ್ದಾರೆ. ಇದೀಗ ಬಾಟಮ್ 3ರಲ್ಲಿ ವಿನಯ್‌, ವರ್ತೂರು ಸಂತೋಷ್, ತುಕಾಲಿ ಸಂತು ಇದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

vinay gowda

ಪ್ರತಿ ಬಾರಿ ಫಿನಾಲೆ ಸಮಯದಲ್ಲಿ 5 ಜನ ಸ್ಪರ್ಧಿಗಳು ಇರುತ್ತಿದ್ದರು. ಆದರೆ ಈ ಬಾರಿ 6 ಜನ ಸ್ಪರ್ಧಿಗಳು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. 6 ಜನರ ಶ್ರಮ, ಪೈಪೋಟಿ ಗಮನಿಸಿ ಸುದೀಪ್ (Sudeep) ಸ್ಪರ್ಧಿಗಳಿಗೆ ಸೂಪರ್ ಗಿಫ್ಟ್ ನೀಡಿದ್ದಾರೆ. ವರ್ತೂರು ಸಂತೋಷ್, ತುಕಾಲಿ ಸಂತು, ವಿನಯ್, ಕಾರ್ತಿಕ್, ಪ್ರತಾಪ್, ಸಂಗೀತಾ ಫಿನಾಲೆ ಕಣದಲ್ಲಿದ್ದಾರೆ. ‘ಬಿಗ್ ಬಾಸ್’ ಶೋ ಕುರಿತು ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ.

bigg boss kannada 10

ಇಂದು (ಜ.27) ಫಿನಾಲೆಯ ಮೊದಲ ದಿನವಾಗಿದ್ದು, 6 ಜನರಲ್ಲಿ ಇಬ್ಬರನ್ನು ಎಲಿಮಿನೇಟ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಅದರಲ್ಲಿ ವರ್ತೂರು ಸಂತೋಷ್, ತುಕಾಲಿ (Tukali Santhu), ವಿನಯ್ ಡೇಂಜರ್ ಝೋನ್‌ನಲ್ಲಿದ್ದಾರೆ ಹೀಗೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ನಿಜನಾ ಎಂದು ತಿಳಿಯಲು ಎಪಿಸೋಡ್‌ ಪ್ರಸಾರವಾಗುವವರೆಗೂ ಕಾಯಬೇಕಿದೆ. ಇದನ್ನೂ ಓದಿ:ಕುಪ್ಪಳ್ಳಿಯ ಕವಿಮನೆಯಲ್ಲಿ ಖ್ಯಾತ ನಟ ಸಾಯಿಕುಮಾರ್

sudeep 2

ಈಗಾಗಲೇ ನಾಮಿನೇಟ್ ಆಗಿರುವ ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಿನ್ನೆಯಿಂದಲೇ ಒಂದಷ್ಟು ಚಿತ್ರೀಕರಣದ ಕೆಲಸವನ್ನೂ ಮುಗಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಇವತ್ತು ಮತ್ತು ನಾಳೆ ಎರಡು ದಿನಗಳ ಕಾಲ ಫಿನಾಲೆ ಶೂಟಿಂಗ್ ನಡೆಯಲಿದೆ. ಜೊತೆಗೆ ಇವತ್ತು ಇಬ್ಬರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರಂತೆ.

ಡ್ರೋನ್ ಪ್ರತಾಪ್ (Drone Prathap), ಸಂಗೀತಾ ಶೃಂಗೇರಿ (Sangeetha Sringeri), ಕಾರ್ತಿಕ್, ತುಕಾಲಿ ಸಂತು, ವರ್ತೂರು ಸಂತು ಹಾಗೂ ವಿನಯ್ ಸದ್ಯ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಸಂಗೀತಾ, ವಿನಯ್ ಹಾಗೂ ಡ್ರೋನ್ ಪ್ರತಾಪ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಅಂತಿಮವಾಗಿ ಬಿಗ್ ಬಾಸ್ ಪಟ್ಟ ಯಾರ ಪಾಲಾಗಲಿದೆ ಎನ್ನುವುದು ನಾಳೆ ಗೊತ್ತಾಗಲಿದೆ.

Share This Article