ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದರ್ಶನ್‌ಗೆ (Darshan) ಇಂದು (ಅ.30) 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಇದರಿಂದ ದರ್ಶನ್ ಪುತ್ರನಿಗೆ ದೀಪಾವಳಿ ಸಂದರ್ಭದಲ್ಲಿ ಭರ್ಜರಿ ಗಿಫ್ಟ್ ಸಿಕ್ಕಿದೆ. ಅ.31ರಂದು ವಿನೀಶ್ (Vineesh Darshan) ಹುಟ್ಟುಹಬ್ಬವನ್ನು (Birthday) ತಂದೆಯ ಜೊತೆ ಆಚರಿಸುವ ಅವಕಾಶ ಸಿಕ್ಕಿದೆ. ಇದನ್ನೂ ಓದಿ:ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ
ದರ್ಶನ್‌ಗೆ ಜಾಮೀನು ಸಿಕ್ಕಿರೋದು ಕುಟುಂಬಸ್ಥರಿಗೆ, ಫ್ಯಾನ್ಸ್‌ಗೆ ಖುಷಿ ಆಗಿದೆ. ಇದೇ ವೇಳೆ, ದರ್ಶನ್ ಪುತ್ರ ವಿನೀಶ್‌ಗೆ ಡಬಲ್ ಧಮಾಕ ಸಿಕ್ಕಂತಾಗಿದೆ. ಅ.31ರಂದು ವಿನೀಶ್ ಹುಟ್ಟುಹಬ್ಬ ಜೊತೆಗೆ ತಂದೆಯೊಂದಿಗೆ ದೀಪಾವಳಿ ಹಬ್ಬ ಆಚರಿಸುವ ಚಾನ್ಸ್ ಸಿಕ್ಕಿದೆ. ನಾಳೆ ತಂದೆಯ ಜೊತೆ ವಿನೀಶ್ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.
ಅಂದಹಾಗೆ, ದರ್ಶನ್‌ಗೆ ಬೇಲ್ ಸಿಕ್ಕಿದ್ದಕ್ಕೆ ಕಾಮಾಕ್ಯ ದೇವಿಗೆ ವಿಜಯಲಕ್ಷ್ಮಿ ಧನ್ಯವಾದ ತಿಳಿಸಿದರು. ಸೋಶಿಯಲ್ ಮೀಡಿಯಾದಲ್ಲಿ ಕಾಮಾಕ್ಯ ದೇವಸ್ಥಾನದ ಫೋಟೋ ಶೇರ್ ಮಾಡಿ ಥ್ಯಾಂಕ್‌ಫುಲ್, ಗ್ರೇಟ್‌ಫುಲ್, ಬ್ಲೆಸ್ಡ್ ಎಂದು ವಿಜಯಲಕ್ಷ್ಮಿ ಬರೆದು ಸಂತಸ ವ್ಯಕ್ತಪಡಿಸಿದ್ದಾರೆ.