ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದ ಸ್ಟಾರ್ ರೆಸ್ಲರ್ ವಿನೇಶ್ ಫೋಗಟ್ (Vinesh Phogat) ಭಾರತಕ್ಕೆ ಮರಳಿದ ಬಳಿಕ ಚಿನ್ನದ ಪದಕ (Gold Medal) ಪಡೆದಿದ್ದಾರೆ.
ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ವಿನೇಶ್ ಅವರು ಒಲಿಂಪಿಕ್ಸ್‌ನಿಂದಲೇ ಅನರ್ಹಗೊಂಡರು, ಅಲ್ಲದೇ ವಿನೇಶ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿತ್ತು. ಹಾಗಿದ್ದರೂ ಚಿನ್ನದ ಪದಕ ಸಿಕ್ಕಿದ್ದು ಹೇಗೆ ಅನ್ನೋದು ಅಚ್ಚರಿಯಾಗಿದೆ. ಈ ಬಗ್ಗೆ ತಿಳಿಯಬೇಕಿದ್ದರೆ ಮುಂದೆ ಓದಿ… ಇದನ್ನೂ ಓದಿ: ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್ ಸಿಂಗ್
Advertisement
Advertisement
ಶನಿವಾರ ಭಾರತಕ್ಕೆ ಮರಳಿದ ಫೋಗಟ್‌ಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿತು. ಅಭಿಮಾನಿಗಳನ್ನು ನೋಡಿ ಫೋಗಟ್ ಭಾವೋದ್ವೇಗಕ್ಕೆ ಒಳಗಾದರು. ಫೋಗಟ್ ಕಣ್ಣಲ್ಲಿ ನೀರು ಉಕ್ಕಿತ್ತು. ಕಾಂಗ್ರೆಸ್ ಸಂಸದ ದೀಪಿಂದರ್ ಹೂಡಾ, ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸಂತೈಸುವ ಕೆಲಸ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳಿದರು. ರೋಡ್‌ಶೋನಲ್ಲಿ ದೊಡ್ಡ ಗುಂಪು ಅವಳನ್ನು ಹಿಂಬಾಲಿಸಿತು.
Advertisement
Balali promised, Balali delivered!
🥇 Vinesh Phogat was presented a gold medal by community elders in her native village. A massive crowd is in attendance despite the felicitation beginning well past midnight.
Follow live updates here ➡️ https://t.co/1TxFIwzxZw pic.twitter.com/4FE6fezqLF
— Sportstar (@sportstarweb) August 17, 2024
Advertisement
ದೆಹಲಿಯಿಂದ ಬಾಳಲಿಗೆ ಹೋಗುವ ಮಾರ್ಗದಲ್ಲಿ, ಹಲವಾರು ಗ್ರಾಮಗಳಲ್ಲಿ ವಿನೇಶ್ ಬೆಂಬಲಿಗರು ಅವರನ್ನ ಸನ್ಮಾನಿಸಿದರು, 135 ಕಿಮೀ ದೂರದ ಪ್ರಯಾಣವು ಸುಮಾರು 13 ಗಂಟೆಗಳ ಕಾಲ ತೆಗೆದುಕೊಂಡಿತು. ಬಳಿಕ ಅವರ ಹುಟ್ಟೂರು ಬಾಳಲಿಯಲ್ಲಿ ಸಮುದಾಯದ ಹಿರಿಯರು ಚಿನ್ನದ ಪದಕ ನೀಡಿ ಗೌರವಿಸಿದರು. ಇದನ್ನೂ ಓದಿ: WTC ಅಂಕಪಟ್ಟಿಯಲ್ಲಿ ಭಾರತ ಮತ್ತೆ ನಂ.1 – 2ನೇ ಸ್ಥಾನಕ್ಕೆ ಕುಸಿದ ಆಸೀಸ್
ನಿಗದಿಗಿಂತ ತೂಕಕ್ಕಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕೆ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು. ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ ತಮ್ಮ ವಿರುದ್ಧದ ಕ್ರಮ ಪ್ರಶ್ನಿಸಿ ವಿನೇಶ್ ಆ.9 ರಂದು ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಭವಿಷ್ಯದ ಬಗ್ಗೆ ಖಚಿತವಿಲ್ಲ – 2032ರವರೆಗೆ ಆಡುವ ಸುಳಿವು ನೀಡಿದ ವಿನೇಶ್ ಫೋಗಟ್
ಫೈನಲ್ ಪಂದ್ಯದ ಮುನ್ನಾದಿನ ನಾನು ಮೂರು ಪಂದ್ಯವನ್ನು ಆಡಿದ್ದೇನೆ. ಆ ದಿನ ನಿಗದಿತ 50 ಕೆಜಿ ತೂಕದ ಮಿತಿಯಲ್ಲಿ ಇದ್ದ ಕಾರಣ ಜಂಟಿಯಾಗಿ ಬೆಳ್ಳಿ ಪದಕದ ಗೌರವ ನೀಡಬೇಕೆಂದು ಮನವಿ ಮಾಡಿದ್ದರು. ವಿನೇಶ್ ಫೋಗಟ್ ಪರವಾಗಿ ಖ್ಯಾತ ವಕೀಲ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಆದಾಗ್ಯೂ ವಿನೇಶ್ ಅವರ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿಸಿತ್ತು.
ವಿನೇಶ್ ಎರಡು ಬಾರಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ, ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು 8 ಏಷ್ಯನ್ ಚಾಂಪಿಯನ್‌ಶಿಪ್ ಪದಕಗಳನ್ನು ಗೆದ್ದಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್‌ಗೆ ಶಾಕ್ ಕೊಟ್ಟ ಆರ್‌ಸಿಬಿ – ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಔಟ್?