– ಕುಸ್ತಿಪಟು ಬಜರಂಗ್ ಪುನಿಯಾ ಕೂಡ ಕಾಂಗ್ರೆಸ್ ಸೇರ್ಪಡೆ
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat) ಮತ್ತು ಬಜರಂಗ್ ಪುನಿಯಾ (Bajrang Punia) ಶನಿವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ (Congress) ಸೇರ್ಪಡೆಯಾದರು.
Advertisement
ಇಬ್ಬರು ಕುಸ್ತಿಪಟುಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ದೆಹಲಿಯ ನಿವಾಸಕ್ಕೆ ಆಗಮಿಸಿ ಬಳಿಕ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಆರ್ಥಿಕ ಅವ್ಯವಹಾರಗಳ ಸಿಬಿಐ ತನಿಖೆ ಪ್ರಶ್ನಿಸಿ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿ ವಜಾ
Advertisement
#WATCH | Delhi | Bajrang Punia and Vinesh Phogat join the Congress party in the presence of party general secretary KC Venugopal, party leader Pawan Khera, Haryana Congress chief Udai Bhan and AICC in-charge of Haryana, Deepak Babaria. pic.twitter.com/LLpAG09Bw5
— ANI (@ANI) September 6, 2024
Advertisement
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಸೆ.4 ರಂದು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾದ ನಂತರ ಈ ಬೆಳವಣಿಗೆಯಾಗಿದೆ. ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳಿಗೆ ಕೊನೆಗೂ ತೆರೆಬಿದ್ದಿದೆ.
Advertisement
ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್ ಫೋಗಟ್ ಭಾರತೀಯ ರೈಲ್ವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಫೋಗಟ್ ಪೋಸ್ಟ್ ಹಾಕಿದ್ದರು. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ