ನವದೆಹಲಿ: ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) 150 ಗ್ರಾಂ ಹೆಚ್ಚುವರಿ ತೂಕದಿಂದ ಪದಕ ವಂಚಿತರಾಗಿದ್ದ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಇದ್ದಕ್ಕಿದ್ದಂತೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದರು. ಕೂದಲೆಳೆ ಅಂತರದಲ್ಲಿ ಪದಕ ವಂಚಿತರಾದ ನಿರಾಶೆಯಿಂದ ಈ ಆಘಾತಕ್ಕಾರಿ ನಿರ್ಧಾರ ತೆಗೆದುಕೊಂಡಿರು. ಇದೀಗ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದು, ಮತ್ತೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.
— Vinesh Phogat (@Phogat_Vinesh) December 12, 2025
ಹೌದು.. 2028 ರ ಲಾಸ್‌ಏಂಜಲೀಸ್ ಒಲಿಂಪಿಕ್ಸ್‌ನತ್ತ (2028 LA Olympics) ಚಿತ್ತ ಹರಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸತ್ಯಕ್ಕೆ ಜಯವಾಗಿದೆ: ಚೊಚ್ಚಲ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಫೋಗಟ್ ಮಾತು
ಪ್ಯಾರಿಸ್ ಬಳಿಕ ಎಲ್ಲವೂ ಮುಗಿಯಿತೇ ಎಂದು ಜನರು ನನ್ನನ್ನ ಕೇಳುತ್ತಲೇ ಇದ್ದರು. ಈ ಪ್ರಶ್ನೆಗಳಿಗೆ ದೀರ್ಘಕಾಲದ ವರೆಗೆ ನನ್ನ ಬಳಿ ಉತ್ತರವಿರಲಿಲ್ಲ. ಒತ್ತಡ, ನಿರೀಕ್ಷೆ ಮತ್ತು ನನ್ನದೇ ಮಹತ್ವಾಕಾಂಕ್ಷೆಗಳಿಂದ ದೂರ ಸರಿದು ನಾನು ನನ್ನನ್ನೇ ಹುಡುಕಿಕೊಳ್ಳಬೇಕಾಯಿತು. ವರ್ಷದ ನಂತರ ನಾನು ಸುಧಾರಿಸಿಕೊಂಡೆ. ಆ ನಂತರ ಮೌನದ ಮಧ್ಯೆ ನಾನು ಈ ಕ್ರೀಡೆಯನ್ನು ಇನ್ನೂ ಪ್ರೀತಿಸುತ್ತೇನೆ ಎಂದು ನನಗೆ ಸ್ಪಷ್ಟವಾಯಿತು ಎಂದು ಹೇಳಿದ್ದಾರೆ.
ಮತ್ತೆ ಸ್ಪರ್ಧಿಸುವ ನಿರ್ಧಾರಕ್ಕೆ ಕಾರಣವಾದ ಆಂತರಿಕ ಶಕ್ತಿಯನ್ನು ಉಲ್ಲೇಖಿಸಿದ ಅವರು, ʻಬೆಂಕಿ ಎಂದಿಗೂ ಆರಲಿಲ್ಲ, ಅದು ಆಯಾಸದ ಅಡಿಯಲ್ಲಿ ಹೂತುಹೋಗಿತ್ತು. ಈಗ ಭಯವಿಲ್ಲದ ಹೃದಯದೊಂದಿಗೆ, ಬಗ್ಗದ ಮನೋಭಾವದೊಂದಿಗೆ ಲಾಸ್ ಏಂಜಲ್ಸ್ LA28 ಕಡೆ ಹೆಜ್ಜೆ ಹಾಕುತ್ತಿದ್ದೇನೆʼ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತ್ರ ಮೋದಿ ಮಾತನಾಡಲು ಮುಂದಾಗಿದ್ದರು, ನಾನೇ ನಿರಾಕರಿಸಿದ್ದೆ: ವಿನೇಶ್
ತಾಯಿಯಾದ ಬಳಿಕ ಅಖಾಡಕ್ಕೆ ಮರಳುತ್ತಿರುವ ವಿರಳ ಭಾರತೀಯ ಅಥ್ಲೀಟ್ ಗಳಲ್ಲಿ ವಿನೇಶ್ ಕೂಡ ಒಬ್ಬರಾಗಿದ್ದಾರೆ. 2025ರ ಜುಲೈನಲ್ಲಿ ಗಂಡು ಮಗುವಿಗೆ ಜನ್ಮನೀಡಿದ ಅವರು, ಈ ಪ್ರಯಾಣದಲ್ಲಿ ನಾನು ಒಬ್ಬಂಟಿಯಾಗಿಲ್ಲ. ನನ್ನ ಮಗು ನನ್ನೊಂದಿಗೆ ಇದೆ. ಲಾಸ್ ಏಂಜಲ್ಸ್ ಒಲಿಂಪಿಕ್ಸ್ ಕಡೆಗೆ ಸಾಗುವ ಹಾದಿಯಲ್ಲಿ ಅವನೇ ನನ್ನ ಚಿಕ್ಕ ಚಿಯರ್ ಲೀಡರ್ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿನೇಶ್ ಫೋಗಟ್, ಬಜರಂಗ್ ರಾಜೀನಾಮೆ ಅಂಗೀಕರಿಸಿದ ರೈಲ್ವೇ
ಚೊಚ್ಚಲ ಚುನಾವಣೆಯಲ್ಲೇ ಗೆಲುವು
ಪ್ಯಾರಿಸ್ ಒಲಿಂಪಿಕ್ಸ್ ಪದಕ ವಂಚನೆ ಬಳಿಕ ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿದ ವಿನೇಶ್ ಫೋಗಟ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಹರಿಯಾಣ (Hariyana) ಚುನಾವಣೆಯ ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರು. ಫೋಗಟ್ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದರು.
ಇದೀಗ 2028ರ ಒಲಿಂಪಿಕ್ಸ್‌ಗೆ 2 ವರ್ಷಗಳು ಬಾಕಿಯಿದ್ದು, ಶೀಘ್ರದಲ್ಲೇ ತಯಾರಿ ಆರಂಭಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಹರಿಯಾಣ ಚುನಾವಣೆ ಸ್ಪರ್ಧೆಗೆ ವಿನೇಶ್ ಫೋಗಟ್‌ಗೆ ಕಾಂಗ್ರೆಸ್ ಟಿಕೆಟ್



