ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ (Vinu Balanja) ‘ಬೇರ’ (Bera) ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು “ಬೇರ” ಚಿತ್ರದ ಕುರಿತು ಮಾತನಾಡಿದರು.
Advertisement
ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ‘ಯಾವ ತಾಯಂದ್ರ ಮಕ್ಕಳೂ ಇನ್ನೊಬ್ರಿಂದಾಗಿ ಸಾಯ್ಬಾರ್ದು’ ಎಂಬುದೇ ಕಥಾಹಂದರ. ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತದೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ ಎಂದು ನಿರ್ದೇಶಕ ವಿನು ಬಳಂಜ ತಿಳಿಸಿದರು.
Advertisement
Advertisement
ಕೇವಲ ಮೂರು ಜನ ಕೆಲಸಗಾರರಿಂದ ಶುರುವಾದ ಎಸ್ ಎಲ್ ವಿ ಸಂಸ್ಥೆಯಲ್ಲಿ ಇಂದು ನೂರೈವತ್ತು ಜನ ಕೆಲಸಗಾರರಿದ್ದಾರೆ. ಈಗ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ “ಬೇರ” ಎಂಬ ಮೊದಲ ಚಿತ್ರ ನಿರ್ಮಾಣ ಮಾಡಿದ್ದೇವೆ. ಈ ಚಿತ್ರಕ್ಕೆ ನಿಮ್ಮ ಹಾರೈಕೆ ಇರಲಿ ಎಂದರು ನಿರ್ಮಾಪಕ ದಿವಾಕರ ದಾಸ. ಇದನ್ನೂ ಓದಿ:ಬಿಗ್ ಆಫರ್ ನೀಡಿದ ಕಿರಣ್ ರಾಥೋಡ್ : ಫೋಟೋ, ವಿಡಿಯೋಗೆ ಇಂತಿಷ್ಟು ರೇಟು
Advertisement
ವಿನು ಬಳಂಜ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ್ದ ಖುಷಿಯಿದೆ. ನಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದರು ಚಿತ್ರದಲ್ಲಿ ನಟಿಸಿರುವ ದತ್ತಣ್ಣ (Duttanna), ಯಶ್ ಶೆಟ್ಟಿ (Yash Shetty), ಹರ್ಷಿಕಾ ಪೂಣಚ್ಛ (Harshika), ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಮುಂತಾದವರು. ಛಾಯಾಗ್ರಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ ಕೂಡ ‘ಬೇರ’ ಚಿತ್ರದ ಕುರಿತು ಮಾತನಾಡಿದರು.