ಶಿವಮೊಗ್ಗ: ಕಳೆದ ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು.
2013 ರ ಲೋಕಸಭಾ ಚುನಾವಣೆಯಲ್ಲಿ ಮತದಾನದ 48 ಗಂಟೆಗಳ ಮೊದಲು ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣದ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ನ್ಯಾಯಾಲಯ ಇಬ್ಬರಿಗೂ ಸೂಚನೆ ನೀಡಿತ್ತು.
Advertisement
Advertisement
ಈ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದ ಜೆಎಂಎಫ್‍ಸಿ ಹೆಚ್ಚುವರಿ ನ್ಯಾಯಾಲಯಕ್ಕೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರು ಮಾರ್ಚ್ 1ಕ್ಕೆ ವಿಚಾರಣೆ ಮುಂದೂಡಿದ್ದಾರೆ.
Advertisement
Advertisement