ಬೆಂಗಳೂರು: ಖಾಸಗಿ ಬಸ್‌ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ.
ಇಂದಿನ ಪ್ರತಿಭಟನೆಯಲ್ಲಿ ಪೊಲೀಸರು ಒಟ್ಟು 13 ಪ್ರಕರಣಗಳನ್ನ ದಾಖಲಿಸಿದ್ದಾರೆ. 13 ಕೇಸ್ ದಾಖಲಿಸಿ ಕಾನೂನು ಉಲ್ಲಂಘನೆ ಮಾಡಿದ 12 ಮಂದಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್
ಸೋಮವಾರ ಮಧ್ಯಾಹ್ನ ಸಚಿವ ರಾಮಲಿಂಗಾರೆಡ್ಡಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟ ತಿಳಿಸಿದೆ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ಸ್ ಸೇರಿದಂತೆ ಎಲ್ಲಾ ಗಿಗ್ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ
ಪ್ರಮುಖ ಬೇಡಿಕೆ ಏನಿತ್ತು?
– ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
– 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
– ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
– 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
– ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
– ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
– ಚಾಲಕರಿಗೆ ವಸತಿ ಯೋಜನೆ ನೀಡಬೇಕು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]