ರಾಮನಗರ: ದಶಪಥ ಹೆದ್ದಾರಿಯಲ್ಲಿ ಮಂಗಳವಾರದಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ ಹಿನ್ನೆಲೆ ಎಕ್ಸ್‌ಪ್ರೆಸ್ ಹೈವೇಯಲ್ಲಿ (Expressway) ಪೊಲೀಸರ ತಪಾಸಣೆ ಮುಂದುವರೆದಿದೆ.
ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಹಾಗೂ ಪೊಲೀಸರು ಜಂಟಿಯಾಗಿ ವಾಹನಗಳ ಡೈವರ್ಟ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೆದ್ದಾರಿಯಲ್ಲಿ ಬೈಕ್ ಸಂಚಾರ ಬಹುತೇಕ ವಿರಳವಾಗಿದೆ. ಬೈಕ್, ಆಟೋ, ಟ್ರಾಕ್ಟರ್‌ಗಳು ಸರ್ವಿಸ್ ರಸ್ತೆಯಲ್ಲೇ ಸಂಚಾರ ಮಾಡುತ್ತಿವೆ. ಇನ್ನೂ ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ (Violation Of Rules) ಮಾಡುತ್ತಿರುವ ವಾಹನಗಳಿಗೆ ಸ್ಥಳದಲ್ಲೇ ದಂಡ (Fine) ವಿಧಿಸಲಾಗುತ್ತಿದೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್
Advertisement
Advertisement
ರಾಮನಗರದ (Ramanagara) ಸಂಘಬಸವನ ದೊಡ್ಡಿ ಎಂಟ್ರಿ ಬಳಿ ಪೊಲೀಸರು ತಪಾಸಣೆ ನಡೆಸಿ ಹಲವು ಬೈಕ್ ಸವಾರರಿಗೆ ದಂಡ ವಿಧಿಸಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಕೂಡಾ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಬೆಳಗ್ಗೆ 8ರಿಂದ 11ಗಂಟೆಯವರೆಗೆ ಬೈಕ್ ಸವಾರರಿಗೆ ಜಾಗೃತಿ ಮೂಡಿಸಿದ ಪೊಲೀಸರು ಬಳಿಕ ದಂಡಾಸ್ತ್ರ ಆರಂಭಿಸಿದ್ದಾರೆ. ಅಲ್ಲದೇ ಹೈವೇಯಲ್ಲಿ ಓವರ್ ಸ್ಪೀಡ್, ಲೇನ್ ಡಿಸಿಪ್ಲೀನ್ ಉಲ್ಲಂಘನೆ ಮಾಡಿದವರಿಗೂ ದಂಡ ಹಾಕಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಪ್ರವಾಸ
Advertisement
Web Stories