ಚಾಮರಾಜನಗರ: ಲೈಂಗಿಕ ಕಿರುಕುಳಕ್ಕೆ ಒಳಗಾದ ಶಾಲಾ ಬಾಲಕಿಗೆ ರಕ್ಷಣೆ ಇಲ್ಲದಂತಾಗಿದ್ದು, ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಆರೋಪಿಗಳನ್ನು ರಾಜಾರೋಷವಾಗಿ ಓಡಾಡಲು ಬಿಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಡಿಸೆಂಬರ್ 6ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹೊಣಕನಪುರ ಬಳಿ ಈ ಘಟನೆ ನಡೆದಿದೆ. ಬಾಲಕಿಯು ಶಾಲೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಕೆಲವರು ಲೈಂಗಿಕ ಕಿರುಕುಳ ನೀಡಿದ್ದರು. ಈ ಬಗ್ಗೆ ಡಿಸೆಂಬರ್ 9ರಂದು ಬಾಲಕಿಯ ತಾಯಿ ಚಾಮರಾಜನಗರದ ಮಹಿಳಾ ಠಾಣೆಗೆ ದೂರು ನೀಡಿದ್ದರು.
ಡಿಸೆಂಬರ್ 6ರಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಹೊಣಕನಪುರ ಬಳಿ ಶಾಲೆಗೆ ಹೋಗಿ ವಾಪಸ್ ಬರುವ ವೇಳೆ ಲೈಂಗಿಕ ಕಿರುಕುಳ ಎದುರಿಸಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದರು. ಈ ಸಂಬಂಧ ಅರಣ್ಯ ಇಲಾಖೆಯ ಗಾರ್ಡ್ ಶಿವಣ್ಣ ನಾಯಕ, ಯಡವನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಾವಲುಗಾರ ಜವರನಾಯಕ, ದೈಹಿಕ ಶಿಕ್ಷಣ ಶಿಕ್ಷಕ ಹರೀಶ್, ಹೊಣಕನಪುರದ ನಾಗರಾಜು ಎಂಬವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು 25 ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಿಸಿದ ದಕ್ಷಿಣ ಭಾರತದ ಸಿನಿ ತಾರೆಯರು
ಅರಣ್ಯ ಇಲಾಖೆ ಗಾರ್ಡ್ ಶಿವಣ್ಣ ನಾಯಕ, ಕಾವಲುಗಾರ ಜವರನಾಯಕ, ದೈಹಿಕ ಶಿಕ್ಷಣ ಶಿಕ್ಷಕ ಹರೀಶ್ ಎಂಬವರು ರಾಜಾರೋಷವಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದರೂ, ಅವರನ್ನು ಬಂಧಿಸಿಲ್ಲ. ಅವರನ್ನು ಈವರೆಗೂ ಅಮಾನತು ಮಾಡಿಲ್ಲ. ಆರೋಪಿಗಳನ್ನು ಬಂಧಿಸದೆ ಪೊಲೀಸರೇ ರಕ್ಷಣೆ ನೀಡುತ್ತಿದ್ದಾರೆಂದು ಬಾಲಕಿ ಪೋಷಕರು ದೂರಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಮಹಿಳೆಯರೇ ಉನ್ನತ ಅಧಿಕಾರಿಗಳಾಗಿದ್ದರೂ, ನೊಂದ ಬಾಲಕಿಗೆ ನ್ಯಾಯ ಸಿಗದಂತಾಗಿದೆ. ಇದನ್ನೂ ಓದಿ: 50 ರೂಪಾಯಿ ಕದ್ದ ಮಗನ ಪ್ರಾಣ ತೆಗೆದ ತಂದೆ