ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ದೌರ್ಜನ್ಯ – ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿಸಿದ ಮರಾಠ ಪುಂಡರು

Public TV
1 Min Read
belagavi chikkodi maratha kannadiga

ಚಿಕ್ಕೋಡಿ: ಕರ್ನಾಟಕದಲ್ಲಿಯೇ (Karnataka) ಕನ್ನಡಿಗರ ಮೇಲೆ ದೌರ್ಜನ್ಯ ನಡೆದಿದೆ. ಕನ್ನಡ ಧ್ವಜ (Kannada Flag) ಅಳವಡಿಸಿದ್ದಕ್ಕೆ ಕನ್ನಡಿಗ (Kannadiga) ಯುವಕರಿಗೆ ಮರಾಠ (Marathas) ಪುಂಡರು ಥಳಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿ ಅಳವಡಿಸಿದ್ದ ಕನ್ನಡ ಧ್ವಜವನ್ನು ತೆರವು ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿತ್ತು. ಅಳವಡಿಸಿದ್ದ ಧ್ವಜವನ್ನು ತೆರವು ಮಾಡುವಂತೆ ಮರಾಠ ಪುಂಡರು ಕನ್ನಡಿಗರಿಗೆ ಥಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೆಲ ಮರಾಠ ಸಮುದಾಯದವರು ಕನ್ನಡಿಗರ ಮೇಲೆ ಹಲ್ಲೆ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದಾರೆ. ಇದನ್ನೂ ಓದಿ: ಕರ್ತವ್ಯ ಲೋಪ ಆರೋಪ – ಮೂವರು ಪಿಎಸ್‌ಐ ಸೇರಿ ಐವರು ಪೊಲೀಸರ ಅಮಾನತು

ಈ ಬಗ್ಗೆ 5 ಮರಾಠ ಪುಂಡರ ವಿರುದ್ಧ ಸಂಕೇಶ್ವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ಬ್ಯಾನರ್ ಪ್ರೇಮ – ಪಂಚಾಯತ್‌ನಿಂದ ರಸ್ತೆ ದುರಸ್ತಿ, ಬ್ಯಾನರ್ ಶಾಸಕರದ್ದು

Share This Article