ಮಣಿಪುರದ (Manipur) ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೇಶವ್ಯಾಪ್ತಿ ಆಕ್ರೋಶ ವ್ಯಕ್ತವಾಗುತ್ತಿದೆ. ತಪ್ಪು ಮಾಡಿರುವ ದುಷ್ಟರಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ ಎಂದು ಬಾಲಿವುಡ್ ಕಲಾವಿದರು ಕೂಡ ಆಗ್ರಹ ಮಾಡಿದ್ದಾರೆ.
ಖ್ಯಾತ ನಟರಾದ ಸಂಜಯ್ ದತ್ (Sanjay Dutt), ಅಕ್ಷಯ್ ಕುಮಾರ್, ರಿತೇಶ್ ದೇಶಮುಖ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri), ಕಿಯಾರಾ ಅಡ್ವಾನಿ ಸೇರಿದಂತೆ ಹಲವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದಾರೆ. ಜೊತೆಗೆ ಈ ಘಟನೆಗೆ ಕಾರಣರಾದ ದುರುಳರಿಗೆ ಆದಷ್ಟು ಬೇಗ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:ಜಯಣ್ಣ ಪಾಲಾದ ‘ಜೈಲರ್’ ಚಿತ್ರದ ಕರ್ನಾಟಕ ವಿತರಣಾ ಹಕ್ಕು
‘ಈ ಘಟನೆಯು ಅತ್ಯಂತ ಹೇಯ ಕೃತ್ಯವಾಗಿದ್ದು, ನಾಗರೀಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ನನಗೆ ಅತ್ಯಂತ ನೋವು ತಂದಿದೆ. ತಪ್ಪು ಮಾಡಿದರಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದಾರೆ. ಮಹಿಳೆಯರ ನೋವಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.
ಈ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆಗಳನ್ನು ಸಹಿಸಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ. ಮನಸ್ಸು ತುಂಬಾ ಘಾಸಿಯಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ನುಡಿದಿದ್ದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]