ದೆಹಲಿಯಲ್ಲಿ ಹನುಮಜಯಂತಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ, ಹಿಂಸಾಚಾರ

Public TV
1 Min Read
delhi

ನವದೆಹಲಿ: ಶನಿವಾರ ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಶೋಭಾಯಾತ್ರೆ ವೇಳೆ ಹಿಂಸಾಚಾರ ನಡೆದಿದೆ.

ಹನುಮ ಜಯಂತಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ. ಈ ವೇಳೆ ಕಲ್ಲು ತೂರಾಟ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗುಂಡು ತಗುಲಿದ್ದು, ಬಾಬೂ ಜಗಜೀವನ್ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಹೆಚ್ಚುವರಿ ಪೊಲೀಸರನ್ನು ಕಳುಹಿಸಲಾಗಿದೆ ಹಾಗೂ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ನಡೆಸಲಾಗಿದೆ. ಇದನ್ನೂ ಓದಿ: ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್

delhi 1

ಹಿಂಸಾಚಾರ ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿದ ಕೇಜ್ರಿವಾಲ್ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಈ ವೇಳೆ ಅರವಿಂದ್ ಕೇಜ್ರಿವಾಲ್ ಎರಡು ಸಮುದಾಯಗಳ ಘರ್ಷಣೆಯ ನಿಯಂತ್ರಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಶಾಂತಿ ಕಾಪಾಡುವ ಹೊಣೆ ಕೇಂದ್ರ ಸರ್ಕಾರದ್ದು ಎಂದಿದ್ದಾರೆ. ಇದನ್ನೂ ಓದಿ: ಸ್ಥಳೀಯ ಉತ್ಪನ್ನ ಮಾತ್ರ ಖರೀದಿಸಲು ಜನರನ್ನು ಪ್ರೇರೇಪಿಸಿ: ಸ್ವಾಮೀಜಿಗಳಿಗೆ ಮೋದಿ ಮನವಿ

ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಸಿಪಿ ಹಾಗೂ ವಿಶೇಷ ಸಿಪಿ ದೀಪೇಂದ್ರ ಪಾಠಕ್ ಜೊತೆ ಮಾತನಾಡಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತಿ ಕದಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

Share This Article