ಬೆಂಗಳೂರು: ಶಿವರಾಜಿನಗರದಲ್ಲಿ (Shivajinagar) ಜಿಬಿಎ (GBA) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಫುಟ್‌ಪಾತ್ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿತ್ತು. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿ 10ನೇ ಎಸಿಎಂಎಂ ಮೆಯೋಹಾಲ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: GBA ಅಧಿಕಾರಿಗಳ ಮೇಲೆ ಹಲ್ಲೆ; ನಾವು ಮಾಡಿದ್ದು ತಪ್ಪೆಂದು ಕೈಮುಗಿದು ಬೇಡಿಕೊಂಡ ಆರೋಪಿಗಳು
12 ಜನ ಆರೋಪಿಗಳನ್ನ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಬಸವರಾಜ್ ಪಡುಕೋಟೆ, ರಘು, ಬಸವರಾಜ್, ಪಾರ್ಥಿಬನ್, ಪರಶುರಾಮ್ ಆರೋಪಿಗಳನ್ನು ಕೋರ್ಟ್ ಕಸ್ಟಡಿಗೆ ನೀಡಿದೆ.
ಶಿವಾಜಿನಗರದಲ್ಲಿ (Shivajinagar) ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ಹಲ್ಲೆ ನಡೆದಿತ್ತು. ಪ್ರಕರಣ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು, ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 12 ಮಂದಿಯನ್ನು ಬಂಧಿಸಿದ್ದರು. ಇದನ್ನೂ ಓದಿ: ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್
