– ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಭಾರಿ ಹಿಂಸಾಚಾರ
ಅಮರಾವತಿ: ಆಂಧ್ರಪ್ರದೇಶದ (Andra Pradesh) ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ಶುಕ್ರವಾರ ಆಡಳಿತಾರೂಢ ತೆಲುಗು ದೇಶಂ ಪಾರ್ಟಿ (TDP) ಹಾಗೂ ವಿರೋಧ ಪಕ್ಷ ವೈಎಸ್ಆರ್ ಕಾಂಗ್ರೆಸ್ ಪಾರ್ಟಿ (YSRCP) ಕಾರ್ಯಕರ್ತರ ನಡುವೆ ಭೀಕರ ಘರ್ಷಣೆ ನಡೆದಿದೆ.
ಅನ್ನಮಯ್ಯ ಜಿಲ್ಲೆಯ ಪುಂಗನೂರು ಹಾಗೂ ರಾಯಚೋಟಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ವಾಹನಗಳನ್ನು ಜಖಂಗೊಳಿಸಿ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಪುಂಗನೂರಿನಲ್ಲಿ ವೈಎಸ್ಆರ್ಸಿಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಪಕ್ಷದ ಮುಖಂಡರೊಂದಿಗೆ ಆಗಮಿಸಿದ ಸಂಸದ ಪಿ.ವಿ. ಮಿಥುನ್ ರೆಡ್ಡಿ ಅವರ ಬೆಂಗಾವಲು ವಾಹನಗಳ ಮೇಲೆ ದುಷ್ಕರ್ಮಿಗಳು ಕಲ್ಲು, ದೊಣ್ಣೆ ಹಾಗೂ ಕಬ್ಬಿಣದ ರಾಡ್ಗಳಿಂದ ಭೀಕರ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಹಲವು ವಾಹನಗಳು ಸಂಪೂರ್ಣ ಜಖಂಗೊಂಡಿವೆ.
VIDEO | Annamayya, Andhra Pradesh: Tension prevailed in Rayachoti after three vehicles parked outside YSRCP party office were set on fire following a clash between activists of the Telugu Desam Party (TDP) and the YSRCP. https://t.co/h8IgspR3tL
— Press Trust of India (@PTI_News) October 16, 2026
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಗುಂಪನ್ನು ಚದುರಿಸಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ತಮ್ಮ ಹತ್ಯೆಗೆ ಸಂಚು ನಡೆದಿತ್ತು ಎಂದು ಸಂಸದ ಮಿಥುನ್ ರೆಡ್ಡಿ ಆರೋಪಿಸಿದ್ದಾರೆ. ಇದನ್ನೂ ಓದಿ: ನೆಲಮಂಗಲ ಹೆದ್ದಾರಿಯಲ್ಲಿ ಹಿಟ್ & ರನ್ಗೆ ಕೇರಳದ ಯುವತಿ ಬಲಿ
రాయచోటి లోనూ విధ్వంసం మొదలుపెట్టింది గొడ్డలి పార్టీనే.. ఏకంగా పోలీసు వాహనాలపైనే దాడులు.
#YcpCriminalPolitics
#YSRCPRowdyism
#PsychoFekuJagan
#EndOfYCP
#AndhraPradesh https://t.co/lWmSToZrmL— Telugu Desam Party (@JaiTDP) October 16, 2026
ರಾಯಚೋಟಿಯ ಎಸ್ಎನ್ ಕಾಲೋನಿಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಕಲ್ಲು ಮತ್ತು ದೊಣ್ಣೆಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸುಮಾರು 15 ಕಾರುಗಳು ಜಖಂಗೊಂಡಿದ್ದು, ನಾಲ್ಕು ಕಾರುಗಳು ಬೆಂಕಿಗಾಹುತಿಯಾಗಿವೆ. ವೈಎಸ್ಆರ್ಸಿಪಿ ಕಚೇರಿಯ ಸಮೀಪವೂ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಆಂಧ್ರಪ್ರದೇಶದ 100 ನಗರ ಸ್ಥಳೀಯ ಸಂಸ್ಥೆಗಳಿಗೆ ಅಕ್ಟೋಬರ್ 16 ರಿಂದ 18 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಿಗದಿಯಾಗಿದೆ. ಅಕ್ಟೋಬರ್ 28 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 30 ರಂದು ಮತ ಎಣಿಕೆ ನಡೆಯಲಿದೆ. ಮೊದಲ ದಿನವೇ ಭುಗಿಲೆದ್ದ ಈ ಹಿಂಸಾಚಾರ ಚುನಾವಣಾ ಭದ್ರತೆಯ ಬಗ್ಗೆ ಆತಂಕ ಮೂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವೈಎಸ್ಆರ್ಸಿಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

