ಕೋಲ್ಕತ್ತಾ: ನಗರದ ಮೊಮಿನ್‌ಪೋರ್ (Mominpore) ಪ್ರದೇಶದಲ್ಲಿ ಧ್ವಜ ಹಾಕುವ ವಿಚಾರವಾಗಿ ಶನಿವಾರ 2 ಸಮುದಾಯಗಳ ನಡುವೆ ಘರ್ಷಣೆ (Violence) ನಡೆದಿತ್ತು. ಕಲ್ಲು ತೂರಾಟ ನಡೆದಿದ್ದು, ಕೆಲ ಮನೆಗಳಿಗೆ ಹಾನಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು 38 ಜನರನ್ನು ಬಂಧಿಸಿದ್ದು, ಹೆಚ್ಚುವರಿಯಾಗಿ ಬಿಜೆಪಿ (BJP) ರಾಜ್ಯಾಧ್ಯಕ್ಷ ಸುಕಾಂತ್ ಮಜುಂದಾರ್ (Sukanta Majumdar) ಅವರನ್ನೂ ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ ಪ್ರಕ್ಷುಬ್ಧ ಪ್ರದೇಶಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಮಜುಂದಾರ್ ಅವರು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲು ತೆರಳಿದ್ದ ಸಂದರ್ಭ ಅವರನ್ನು ಪೊಲೀಸರು ತಡೆದು ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರಯಾಣಿಕ ಖರೀದಿಸಿದ್ದ ಸಮೋಸಾದಲ್ಲಿ ಯೆಲ್ಲೋ ಕಲರ್ ಪೇಪರ್ – IRCTC ಹೇಳೋದೇನು?
Advertisement
Advertisement
ಬಂಧನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮಜುಂದಾರ್, ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಮನೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸರ ಪಾತ್ರ ಶೋಚನೀಯವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಸ್ ಹತ್ತುವಾಗ ಬಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ- ಜ್ಞಾನಭಾರತಿ ಆವರಣದಲ್ಲಿ ಉದ್ವಿಗ್ನ ಸ್ಥಿತಿ
Advertisement
ಬಂಗಾಳ (West Bengal) ಪೊಲೀಸರಿಗೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಸಾಧ್ಯವಾಗದಿದ್ದರೆ, ರಾಜ್ಯ ಆಡಳಿತ ಕೇಂದ್ರದ ಪಡೆಗಳಿಂದ ಸಹಾಯ ಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಇದೀಗ ಪ್ರದೇಶದಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.