ನವದೆಹಲಿ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಪ್ರತಿಭಟನೆ(Parliament Street Police Station) ಸಂಬಂಧಿಸಿದಂತೆ 4 ಎಫ್‌ಐಆರ್ ದಾಖಲಾಗಿದ್ದು 18 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ(Jantar Mantar) ನಡೆದಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸ್(Delhi Police) ಸಿಬ್ಬಂದಿಯೊಬ್ಬರು ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಂದು ಪ್ರತಿಭಟನೆ ನಡೆದಿತ್ತು.
ತಪ್ಪಿತಸ್ಥ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್ (FIR) ದಾಖಲಿಸಬೇಕು ಮತ್ತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಂಟಿ ಜಂತರ್ ಮಂತರ್ ಸಮಿತಿ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದನ್ನೂ ಓದಿ: 9/11 ಮಾದರಿ ದಾಳಿಗೆ ಜುಲೈನಲ್ಲೇ ಸ್ಕೆಚ್ – ಕೊನೆ ಕ್ಷಣದಲ್ಲಿ ಬದಲಾಯ್ತು ಪ್ಲ್ಯಾನ್!
Delhi Police has registered four FIRs in connection with today’s violence at Parliament Street for stabbing, rioting, defacement and obstructing a public servant from discharging his duties. A total of 18 people were arrested and produced in court today: Delhi Police Sources https://t.co/19dvzM4vci
— IANS (@ians_india) October 5, 2026
ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಕನಿಷ್ಠ 15 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 4 ಎಫ್‌ಐಆರ್ ದಾಖಲಾಗಿದೆ. ಚಾಕುವಿನಿಂದ ಇರಿದಿರುವುದು, ಗಲಭೆ, ವಿರೂಪಗೊಳಿಸುವಿಕೆ ಮತ್ತು ಸಾರ್ವಜನಿಕ ಸೇವಕರು ತಮ್ಮ ಕರ್ತವ್ಯ ನಿರ್ವಹಿಸುವುದಕ್ಕೆ ಅಡ್ಡಿಪಡಿಸುವುದು ಮುಂತಾದ ಆರೋಪಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 18 ಮಂದಿಯನ್ನು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

