Connect with us

Districts

ಶಿವಮೊಗ್ಗದಲ್ಲಿ 62 ಮಂದಿ ವಶ, ಯಾವುದೇ ವದಂತಿ ನಂಬಬೇಡಿ – ಐಜಿಪಿ ರವಿ

Published

on

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ಹಿನ್ನೆಲೆಯಲ್ಲಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದರು.

ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಪೊಲೀಸ್ ಬಂದೋಬಸ್ತು ತೀವ್ರಗೊಳಿಸಲಾಗಿದೆ. 9 ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹೊರಗಿನಿಂದ ಬರುವವರ ಮೇಲೆ ನಿಗಾ ಇರಿಸಲಾಗಿದೆ. 22 ಚೀತಾ ಮತ್ತು 13 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ಇರಿಸಿದೆ. ಯಾವುದೇ ಕಾರಣಕ್ಕೂ ಪರಿಸ್ಥಿತಿ ಬಿಗಡಾಯಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

 

ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೆÇಲೀಸರು ಎಲ್ಲಾ ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಫ್ರ್ಯೂ ಮುಂದುವರಿಸಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಯಾವುದೇ ನಿಬರ್ಂಧ ವಿಧಿಸಲಾಗಿಲ್ಲ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕೆಂದು ಅವರು ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವ, ಯಾವುದೇ ವರ್ಗ ಅಥವಾ ಸಮುದಾಯದ ವಿರುದ್ಧ ಅಪರಾಧ ಮಾಡುವಂತೆ ಪ್ರಚೋದಿಸುವ ಬರಹಗಳನ್ನು ವಾಟ್ಸಪ್, ಫೇಸ್ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಹರಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ ಪಿ ಶಾಂತರಾಜ್ ಎಚ್ಚರಿಕೆ ನೀಡಿದ್ದಾರೆ.

ಏನಿದು ಘಟನೆ:
ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಬಳಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ನಾಗೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗ್ಗೆ ನೆಹರೂ ಕ್ರೀಡಾಂಗಣದಲ್ಲಿ ವಾಕಿಂಗ್ ಮುಗಿಸಿ ಮರಳಿ ಹೋಗುತ್ತಿದ್ದ ವೇಳೆ ಐದು ಮಂದಿಯಿದ್ದ ದುಷ್ಕರ್ಮಿಗಳ ತಂಡ ಹಲ್ಲೆಮಾಡಿ ಪರಾರಿಯಾಗಿದ್ದರು. ಈ ಘಟನೆ ನಂತರ ನಗರದಲ್ಲಿ ಐದಾರೂ ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಐದಾರು ಕಾರುಗಳು, 2 ಆಟೋ, 2 ಬೈಕ್, ತರಕಾರಿ ಗಾಡಿಯನ್ನು ಜಖಂ ಗೊಳಿಸಲಾಗಿತ್ತು. 10ಕ್ಕಿಂತ ಹೆಚ್ಚು ಜನರಿಗೆ ಗಾಯಗಳಾಗಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ಗಾಂಧಿ ಬಜಾರ್, ಮೀನು ಮಾರುಕಟ್ಟೆ, ಚೋರ್ ಬಜಾರ್, ರವಿ ವರ್ಮ ಬೀದಿ, ಕಸ್ತೂರಾ ಬಾ ರಸ್ತೆಗಳಲ್ಲಿ ಕಿಡಿಗೇಡಿಗಳು ದುಷ್ಕøತ್ಯ ನಡೆಸಿದ್ದರು. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದರು. ಗಾಯಗೊಂಡಿರುವ ಸುಮಾರು 10 ಕ್ಕಿಂತ ಹೆಚ್ಚು ಜನ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಂಧಿ ಬಜಾರ್ ಸುತ್ತಮುತ್ತ ನಿಲ್ಲಿಸಿದ್ದ, ಸುಮಾರು ಐದಕ್ಕೂ ಹೆಚ್ಚು ಕಾರುಗಳು ಜಖಂಗೊಳಿಸಲಾಗಿತ್ತು.

Click to comment

Leave a Reply

Your email address will not be published. Required fields are marked *

www.publictv.in