ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭುಮ್‌ನಲ್ಲಿ ನೆನ್ನೆಯಷ್ಟೇ ನಡೆದ ಹಿಂಸಾಚಾರದಿಂದಾಗಿ 8 ಮಂದಿ ಸಜೀವ ದಹನವಾಗಿದ್ದಾರೆ. ಈ ಸಂಬಂಧ ಕೋಲ್ಕತ್ತಾ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಇಂದು ಮಧ್ಯಾಹ್ನದಿಂದಲೇ ವಿಚಾರಣೆ ಪ್ರಾರಂಭಿಸಿದೆ.
ಏನಿದು ಪ್ರಕರಣ?
ಇಲ್ಲಿನ ಬಗುಟಿ ಗ್ರಾಮ ಪಂಚಾಯಿತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು. ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬಿರ್‌ಬುಮ್ ಎಸ್‌ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿದೆ. ಇದನ್ನೂ ಓದಿ: ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
Advertisement
Advertisement
ಮನೆಗೆ ಬೆಂಕಿಯಿಟ್ಟ ಗುಂಪಿನ ಬಗ್ಗೆ ರಾಜ್ಯ ಸರ್ಕಾರವು ಎಡಿಜಿ (ಸಿಐಡಿ) ಜ್ಞಾನವಂತ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಘಟನೆಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಮಧ್ಯೆ ಕೇಂದ್ರ ಸರ್ಕಾರವೂ ಘಟನೆ ಬಗ್ಗೆ ಸಮಗ್ರ ವರದಿ ನೀಡುವಂತೆ ಪಶ್ಚಿಮ ಬಂಗಾಳ ರಾಜ್ಯ ಗೃಹ ಸಚಿವಾಲಯಕ್ಕೆ ಸೂಚಿಸಿದೆ.
Advertisement
ಮನೆ ತೊರೆಯುತ್ತಿರುವ ಜನರು
ಜಿಲ್ಲೆಯ ಜನರು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗುತ್ತಿದ್ದಾರೆ. ನಮ್ಮ ಭದ್ರತೆ ದೃಷ್ಟಿಯಿಂದ ಇಲ್ಲಿಂದ ಹೊರಡುತ್ತಿದ್ದೇವೆ. ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ ಎಂದು ವಲಸೆ ಹೊರಡುತ್ತಿದ್ದ ವ್ಯಕ್ತಿಯೊಬ್ಬರು ಹೇಳಿದ್ದಾರೆ.
Advertisement
Horrifying violence and arson orgy #Rampurhat #Birbhum indicates state is in grip of violence culture and lawlessness. Already eight lives lost.
Have sought urgent update on the incident from Chief Secretary.
My thoughts are with the families of the bereaved. pic.twitter.com/vtI6tRJcBX
— Governor West Bengal Jagdeep Dhankhar (@jdhankhar1) March 22, 2022
ಈ ನಡುವೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್‌ಕರ್ ಸಹ ವೀಡಿಯೋ ಸಂದೇಶದ ಮೂಲಕ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಜ್ಯಪಾಲರ ಹೇಳಿಕೆಗೆ ತಿರುಗೇಟು ನೀಡಿದ್ದು, ಅನಗತ್ಯ ಹೇಳಿಕೆಗಳನ್ನ ನೀಡಬೇಡಿ ಎಂದಿದ್ದಾರೆ. ಇದನ್ನೂ ಓದಿ: ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್
Law & order in a rapid freefall in WB.
Tension & terror has gripped Rampurhat area of Birbhum district, after a panchayat upoprodhan (deputy chief); Bhadu Sheik was reportedly killed last evening in a bomb attack.
Angry mob ransacked and set afire several houses afterwards.
— Suvendu Adhikari • শুভেন্দু অধিকারী (@SuvenduWB) March 22, 2022
ಇನ್ನು ಈ ಘಟನೆ ರಾಜಕೀಯ ಕಾದಾಟಕ್ಕೂ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಹಿಂಸಾಚಾರದಲ್ಲಿ 20ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಆದರೆ ನೈಜ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಕಾಲಿಡಲು ಯಾರಿಗೂ ಬಿಡುತ್ತಿಲ್ಲ ಎಂದು ಬಿಜೆಪಿ ಎಂಪಿ ಆರೋಪಿಸಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸುವೇಂದು ಅಧಿಕಾರಿ, ಬಿರ್‌ಭುವ್ ಜಿಲ್ಲೆಯ ಘಟನೆಯ ಉದ್ವಿಗ್ನತೆ ಭಯೋತ್ಪಾದನೆಯನ್ನು ಆವರಿಸಿದೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ವ್ಯವಸ್ಥೆ ಪತನಗೊಂಡಿದೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.