ಕೋಲ್ಕತ್ತಾ: ವಕ್ಫ್ ಕಾಯ್ದೆಯ (Waqf Act) ವಿರುದ್ಧ ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್‌ನಲ್ಲಿ ಮುಸ್ಲಿಮರು (Muslims) ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನಿಮ್ತಿತಾ ನಿಲ್ದಾಣದಲ್ಲಿ ನಿಂತಿದ್ದ ರೈಲಿನ (Rail) ಮೇಲೆ ಕಲ್ಲು ತೂರಾಟ ನಡೆ ಎರಡು ರೈಲನ್ನು ಜಖಂಗೊಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ಸಂಜೆ ಬಳಿಕ ನಡೆದ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕನಿಷ್ಠ ಎರಡು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ: ಅಮಿತ್ ಶಾ ಘೋಷಣೆ
Look at what the Islamists have done at the BDO office in Jalangi, Murshidabad.
The police claim everything is under control.
Then how did so many goons manage to enter such a high-profile area? Didn’t the police have any prior intel? Thousands took to the streets — how was… pic.twitter.com/vyZdJoVIvW
— BJP West Bengal (@BJP4Bengal) April 11, 2025
ಅಲ್ಪಸಂಖ್ಯಾತರ ಪ್ರಾಬಲ್ಯ ಇರುವ ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ಮತ್ತು ಸುಟಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ನಿಮ್ತಿತಾ ರೈಲು ನಿಲ್ದಾಣದಲ್ಲಿ, ಪ್ರತಿಭಟನಾಕಾರರು ಗಂಟೆಗಟ್ಟಲೆ ರೈಲ್ವೆ ಹಳಿಗಳನ್ನು ತಡೆದು ರೈಲ್ವೇ ಆಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರೈಲ್ವೆ ಪೊಲೀಸ್ ಪಡೆ ಸಿಬ್ಬಂದಿ ಲಾಠಿ ಪ್ರಹಾರ ನಡೆಸಬೇಕಾಯಿತು. ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದರು. ನಂತರ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿ, ಧ್ವಂಸಗೊಳಿಸಿದ್ದಾರೆ. ಇದನ್ನೂ ಓದಿ: ತಹವ್ವೂರ್ ರಾಣಾ ಹಸ್ತಾಂತರವು ಮುಂಬೈ ದಾಳಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ದೊಡ್ಡ ಹೆಜ್ಜೆ : ಜೈಶಂಕರ್
Bengal is on the brink — and Mamata Banerjee is to blame.
Violent Muslim mobs, stirred up after Friday prayers, are vandalizing temples and torching Hindu homes in Dhulian, Malancha Farraka, Malda. All over a WAQF Amendment most haven’t even read.
This is the price of years of… pic.twitter.com/k6sSxxfkS6
— BJP West Bengal (@BJP4Bengal) April 11, 2025
ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಹಿಂಸಾಚಾರ ಮಾಡುವವರಿಗೆ ಎಚ್ಚರಿಕೆ ನೀಡಿದ್ದು, ಮುರ್ಷಿದಾಬಾದ್ ಮತ್ತು ಉತ್ತರ 24 ಪರಗಣಗಳ ಇತರ ಸ್ಥಳಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಗಲಭೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಟನೆಯ ವಿಡಿಯೋಗಳನ್ನು ಹಾಕಿ ಮಮತಾ ಸರ್ಕಾರದ ವಿರುದ್ಧ ಕಿಡಿಕಾರಿದೆ.
#WATCH | West Bengal | Morning visuals from Jangipur, Murshidabad, where people staged a protest against the Waqf Amendment Act. Several vehicles were torched. Security has been heightened in the area.
As per the Bengal Police, the situation in the Suti and Samserganj areas of… pic.twitter.com/6qB4juCdoz
— ANI (@ANI) April 12, 2025
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಒಂದು ನಿರ್ದಿಷ್ಟ ಗುಂಪಿನ ತೀವ್ರಗಾಮಿಗಳಿಂದ ಪ್ರತಿಭಟನೆಗಳ ಹೆಸರಿನಲ್ಲಿ ರಾಜ್ಯವು ದೊಡ್ಡ ಪ್ರಮಾಣದ ಹಿಂಸಾಚಾರ, ಅರಾಜಕತೆ ಮತ್ತು ಕಾನೂನುಬಾಹಿರತೆಯನ್ನು ನೋಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಭಾರತದ ಸಂವಿಧಾನವನ್ನು ವಿರೋಧಿಸುತ್ತೇವೆ ಮತ್ತು ದೇಶದ ಕಾನೂನನ್ನು ವಿರೋಧಿಸುತ್ತೇವೆ ಎಂದು ಸ್ಪಷ್ಟವಾಗಿ ಹೇಳಿರುವ ಈ ಜನರು ಬೀದಿಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳನ್ನು ತಮ್ಮ ಇಚ್ಛೆಯಂತೆ ಧ್ವಂಸ ಮಾಡುತ್ತಿದ್ದಾರೆ ಎಂದು ಸಿಟ್ಟು ಹೊರಹಾಕಿದ್ದಾರೆ.