ಬೆಂಗಳೂರು: ಪಬ್ಲಿಕ್ ಟಿವಿ ಸತತ ವರದಿ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ (Parappana Agrahara Jail0 ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಗೃಹ ಸಚಿವ ಪರಮೇಶ್ವರ್ (Parmeshwar) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್, ಜೈಲ್ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರ ಮುಖ್ಯಸ್ಥರಾಗಿರುವ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಇರಲಿದ್ದಾರೆ.

