ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ (Head Bush) ಸಿನಿಮಾ ಎರಡು ಕಾರಣಗಳಿಂದಾಗಿ ವಿವಾದಕ್ಕೆ ತುತ್ತಾಗಿದೆ. ಸಿನಿಮಾದಲ್ಲಿ ಕರಗ (Karaga) ಮತ್ತು ವೀರಗಾಸೆಗೆ (Veeragase) ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಹಲವರು ದೂರು ಕೂಡ ದಾಖಲಿಸಿದ್ದಾರೆ. ಹೀಗಾಗಿ ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿತ್ತು. ಸಿನಿಮಾ ಬೈಕಾಟ್ ಮಾಡಬೇಕು, ದೃಶ್ಯಗಳನ್ನು ಕತ್ತರಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿತ್ತು.
Advertisement
ಎರಡೂ ವಿವಾದಗಳ (Controversy) ಕುರಿತು ಪ್ರತಿಕ್ರಿಯೆ ನೀಡಿದ್ದ ಧನಂಜಯ್ (Dhananjay), ತಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ. ಅವಮಾನ ಕೂಡ ಮಾಡಿಲ್ಲ. ಸಿನಿಮಾ ನೋಡಿದ ನಂತರ ಮಾತನಾಡಿ ಎಂದು ಕೇಳಿಕೊಂಡಿದ್ದರು. ಆದರೂ, ಪ್ರತಿಭಟನೆ ಮಾತ್ರ ನಿಲ್ಲಲಿಲ್ಲ. ಫಿಲ್ಮ್ ಚೇಂಬರ್ ಗೂ ದೂರು ದಾಖಲಿಸಿದ್ದರು. ಹಾಗಾಗಿ ಇಂದು ತಮ್ಮ ತಂಡದೊಂದಿಗೆ ಪತ್ರಿಕಾಗೋಷ್ಠಿ ಮಾಡಿದ ಧನಂಜಯ್, ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ
Advertisement
Advertisement
ನಾವು ಯಾರನ್ನೂ ನೋಯಿಸುವ ಉದ್ದೇಶದಿಂದ ಸಿನಿಮಾ ಮಾಡಿಲ್ಲ. ದೇವರ ಬಗ್ಗೆ, ವೀರಗಾಸೆ ಹಾಗೂ ಕರಗದ ಬಗ್ಗೆ ನಮಗೂ ಅಪಾರವಾದ ಅಭಿಮಾನಿ, ಭಕ್ತಿ ಇದೆ. ಆದರೂ, ನಿಮಗೆ ನೋವು ಆಗಿದ್ದರೆ ಕ್ಷಮಿಸಿ ಎಂದು ನಿರ್ದೇಶಕ ಶೂನ್ಯ ಅವರು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಆದರೂ, ಕರಗ ಸಮಿತಿಯ ಸದಸ್ಯರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ದೂರು ನೀಡಿದ್ದಾರೆ.