ಮಡಿಕೇರಿ: ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬಸ್‌ನಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಅವರು ಇಂದು ಮುಂಜಾನೆ ಎಂದಿನಂತೆ ಮೈಸೂರಿನಿಂದ ವಿರಾಜಪೇಟೆಗೆ ಕರ್ತವ್ಯಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಲವಾಲ ಸಮೀಪ ಬಸ್ ತಲುಪುತ್ತಿದ್ದಂತೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ಮೇಕೆದಾಟು ಕುರಿತು ಸರ್ವಪಕ್ಷ ಸಭೆಯ ಅಗತ್ಯವಿಲ್ಲ, ಕೀಳುಮಟ್ಟದ ರಾಜಕೀಯ ಬೇಡ: ಉದಯನಿಧಿಗೆ ತ.ನಾಡು ಸಿಎಂ ತರಾಟೆ
ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತಾದರೂ, ಆಸ್ಪತ್ರೆ ತಲುಪುವ ಮುನ್ನವೇ ಬಸ್‌ನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಬಳಿಕ ವೈದ್ಯರು ಪರಿಶೀಲಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಸರಳ, ಸೌಮ್ಯ ಸ್ವಭಾವದ ಅಧಿಕಾರಿಯಾಗಿದ್ದ ಆನಂದ್ ಪಿ.ಜೆ. ಅವರು ಶಿಕ್ಷಣ ಇಲಾಖೆಯಲ್ಲಿ ಸಮರ್ಪಕ ಸೇವೆ ಸಲ್ಲಿಸಿ, ಸಹೋದ್ಯೋಗಿಗಳು ಹಾಗೂ ಶಿಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನದಿಂದ ಶಿಕ್ಷಣ ಇಲಾಖೆ ಸಿಬ್ಬಂದಿ, ಶಿಕ್ಷಕರು ಹಾಗೂ ಸಾರ್ವಜನಿಕರಲ್ಲಿ ತೀವ್ರ ದುಃಖದ ವಾತಾವರಣ ನಿರ್ಮಾಣವಾಗಿದೆ.ಇದನ್ನೂ ಓದಿ: ಬೆಂಗಳೂರು ಹೋಟೆಲ್‌ಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ; 31 ಲೀಟರ್ ಎಕ್ಸ್‌ಪೈರಿ ಹಾಲು ಪತ್ತೆ



