ದಾವಣಗೆರೆ: ಜಿಲ್ಲೆಯಲ್ಲಿ ವೈರಲ್ ಫೀವರ್ ಹಾಗೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.
ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕಿ ಸುಮಯ್ಯಾ ಕೌಸರ್ ಸಾವನ್ನಪ್ಪಿದ್ದಾಳೆ. ಇದು ಡೆಂಘೀ ಶಂಕಿತ ಪ್ರಕರಣವಾಗಿದ್ದು, ಡೆಂಘೀ ಎಂದು ಖಚಿತವಾಗಿಲ್ಲ ಎಂದು ಡಿಹೆಚ್‍ಒ ನಾಗರಾಜ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
Advertisement
Advertisement
ಬಾಲಕಿ ಸಾವಿನ ಬಗ್ಗೆ ದಾವಣಗೆರೆ ಡಿಎಚ್‍ಒ ಡಾ.ನಾಗರಾಜ ಮಾತನಾಡಿ, ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿ, ದಾವಣಗೆರೆ ನಗರದ ಬಾಪೂಜಿ ಮಕ್ಕಳ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಸಾವನ್ನಪ್ಪಿದ ಬಾಲಕಿ ಸುಮಯ್ಯಾ ಕೌಸರ್ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಮುಜಾಹಿದ್ ಅವರ ಪುತ್ರಿ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.0.57ಕ್ಕೆ ಇಳಿಕೆ- 847 ಹೊಸ ಕೊರೊನಾ ಕೇಸ್, 20 ಸಾವು
Advertisement
Advertisement
ಜಿಲ್ಲೆಯಲ್ಲಿ ಡೆಂಘೀ ಹಾಗೂ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಕ್ಕಳನ್ನು ಹೆಚ್ಚು ಬಾಧಿಸುತ್ತಿದೆ. ಹೀಗಾಗಿ ಪೋಷಕರಲ್ಲಿ ಆತಂಕ ಮನೆ ಮಾಡಿದೆ.